ಬೆಂಗಳೂರು : ಕಳ್ಳತನ ಮಾಡಿದರು ನಿಯತ್ತಿನಲ್ಲಿ ಹಂಚುವವರಿದ್ದಾರೆಂಬುದಕ್ಕೆ ಈ ಪ್ರಕರಣ ಸಾಕ್ಷಿ. ಮನೆ ಗಳ್ಳತನ ಮಾಡಿ ೨೦ ವಿದ್ಯಾರ್ಥಿಗಳ ಶಾಲಾ, ಕಾಲೇಜು ಶುಲ್ಕ ಪಾವತಿಸಿದ್ದ ಖತರ್ನಾಕ್ ಕಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೇಗೂರಿನ ಶಿವು ಅಲಿಯಾಸ್ ಶಿವರಪ್ಪನ್ ಬಂಧಿತ ಆರೋಪಿ ಯಾಗಿದ್ದಾನೆ. ಅವಿವಾಹಿತನಾಗಿದ್ದ ಶಿವು ಜೀವನ ದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಸ್ನೇಹಿತರು ಮಕ್ಕಳ ಶಾಲಾ ಶುಲ್ಕ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದನು. ಅಂತಹವರಿಗೆ ಕೈಯಲ್ಲಾದ ಸಹಾಯ ಮಾಡಲು ಆತ್ಮಹತ್ಯೆ ಯೋಚನೆ ಕೈಬಿಟ್ಟು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿ ದೋಚಿದ ಚಿನ್ನಾಭರಣ ವನ್ನು ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್ನ ಸಹಾಯದಿಂದ ಮಾರಾಟ ಮಾಡಿದ್ದಾನೆ.
ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್ಗೆ ೪ ಲಕ್ಷ, ಅನಿಲ್ಗೆ ೪ ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ ೧೪ ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜ್ ಫೀಸ್ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಶಿವು, ಅನಿಲ್ ಹಾಗು ವಿವೇಕ್ ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.


