Sunday, July 19, 2026
Homeರಾಜಕೀಯಬೆಂಗಳೂರು : ಮಳೆ ಮತ್ತು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ 5 ಕೋಟಿ...

ಬೆಂಗಳೂರು : ಮಳೆ ಮತ್ತು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ. ನೆರವು ಘೋಷಿಸಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಮಳೆ ಮತ್ತು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶ ರಾಜ್ಯಕ್ಕೆ ಕರ್ನಾಟಕ ಸರ್ಕಾರವು ರೂ.5 ಕೋಟಿ
ಆರ್ಥಿಕ ನೆರವು ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಮಾಚಲದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರಿಗೆ ಪತ್ರ
ಬರೆದಿದ್ದಾರೆ.

ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊAಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ
ಪ್ರವಾಹದಿಂದಾಗಿ ಅಪಾರ ಜೀವ ಮತ್ತು ಆಸ್ತಿ ಹಾನಿಯಾಗಿದೆ. ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕದ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತದೆ. ವಿಪತ್ತು
ಪರಿಹಾರ ಮತ್ತು ಪುನರ್ವಸತಿಗಾಗಿ ನಮ್ಮ ಸರ್ಕಾರವು ರೂ.5 ಕೋಟಿ
ನೆರವು ನೀಡಿದೆ ಎಂದು ತಿಳಿಸಿದ್ದಾರೆ.ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ
ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular