Thursday, March 12, 2026
Flats for sale
Homeಕ್ರೈಂಬೆಂಗಳೂರು : ಬೆಂಗಳೂರಿನಲ್ಲಿ ದೆಹಲಿ ಮಾದರಿ ಭೀಕರ ಕೊಲೆ : ಮಹಿಳೆಯನ್ನು ಹತ್ಯೆ ಮಾಡಿ 20ಕ್ಕೂ...

ಬೆಂಗಳೂರು : ಬೆಂಗಳೂರಿನಲ್ಲಿ ದೆಹಲಿ ಮಾದರಿ ಭೀಕರ ಕೊಲೆ : ಮಹಿಳೆಯನ್ನು ಹತ್ಯೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ…!

ಬೆಂಗಳೂರು : ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್‌ ಮಾದರಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

ಮೃತ ಯುವತಿಯನ್ನು ಛತ್ತೀಸ್​ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಮಹಿಳೆ 2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದು ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. . 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular