Saturday, July 18, 2026
Homeರಾಜ್ಯಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರವರ ಧರ್ಮಪತ್ನಿ ಚೆನ್ನಮ್ಮ ನಿಧನ.

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರವರ ಧರ್ಮಪತ್ನಿ ಚೆನ್ನಮ್ಮ ನಿಧನ.

ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಇಂದು (ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆ, ಎದೆಭಾರ ಹಾಗೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜುಲೈ 16ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆ ಪ್ರಕಟಣೆ ಪ್ರಕಾರ, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದ ವೇಳೆ ಇಂದು ಸಂಜೆ ಸುಮಾರು 4 ಗಂಟೆಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular