Friday, March 6, 2026
Flats for sale
Homeರಾಜ್ಯಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾ‌ರ್ ವಿಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್ : ಮಹಮ್ಮದ್ ನಲಪಾಡ್...

ಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾ‌ರ್ ವಿಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್ : ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್ ..!

ಬೆಂಗಳೂರು : ಮಾಜಿ ಸಚಿವ ಪ್ರಭಾವಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ವಿಡಿಯೊ ತುಣುಕು ತೋರಿಸಿ 20 ಲಕ್ಷ ರೂ. ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್‌ ಹಾಗೂ ಆಕೆಯ ಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಣ ನೀಡುವಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾ‌ರ್ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದು ಸಲುಗೆ ಮಾತುಕತೆಯ ಆಡಿಯೋ-ವಿಡಿಯೋ ಬಿಡುಗಡೆ ಮಾಡದಿರಲು 20 ಲಕ್ಷ ರು. ಬೇಡಿಕೆ ಇಟ್ಟ ಘಟನೆ ನಡೆದಿದೆ.ಇನ್ನು ಹನಿಟ್ರ್ಯಾಪ್​ ಲೇಡಿ ಮೊಬೈಲ್​ನಲ್ಲಿ ಎಂಟು ಜನರ ವಿಡಿಯೋಗಳ ಇರುವುದು ಪತ್ತೆಯಾಗಿದೆ.

ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿತ್ಯ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆಕೆ, ಬಳಿಕ ಇವುಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾರಂಭಿಸಿದ್ದಳು. 2 ದಿನ ಹಿಂದೆ ಬೆಂಗಳೂರಿನಲ್ಲಿ ನೆಲೆಸಿರುವ ಮಾಲೀಕಯ್ಯ ಪುತ್ರ ರಿತೀಶ್ ಭೇಟಿಯಾಗಿ ಡೀಲ್ ನಡೆಸಲು ಮಂಜುಳಾ ದಂಪತಿ ಮುಂದಾಗಿದ್ದರು. ಬಳಿಕ ಈ ಬಗ್ಗೆ ರಿತೇಶ್ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular