Tuesday, July 21, 2026
Homeರಾಜಕೀಯಬೆಂಗಳೂರು : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ.

ಬೆಂಗಳೂರು : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ.

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾದ ಎಸ್. ಎಸ್. ನಕುಲ್, ಉದ್ಯಮಿ ಎಸ್. ಕೆ. ಸತೀಶ್ ಅವರ ಪುತ್ರರಾಗಿದ್ದಾರೆ. ಈ ಹಿಂದೆ ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ದಕ್ಷ ಹಾಗೂ ಜನಪರ ಆಡಳಿತಕ್ಕಾಗಿ ಹೆಸರುವಾಸಿಯಾಗಿದ್ದಾರೆ.

ಆಡಳಿತಾತ್ಮಕ ಅನುಭವ, ಕಾರ್ಯಕ್ಷಮತೆ ಮತ್ತು ಸೇವಾ ದಾಖಲೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮ್ಮ ಕಾರ್ಯದರ್ಶಿಯಾಗಿ ಎಸ್. ಎಸ್. ನಕುಲ್ ಅವರನ್ನು ನೇಮಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular