Saturday, March 14, 2026
Flats for sale
Homeರಾಜಕೀಯಬೆಂಗಳೂರು : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ : ಮತ್ತೆ ವಿಚಾರಣೆ...

ಬೆಂಗಳೂರು : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ : ಮತ್ತೆ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಸೆ.9ಕ್ಕೆ ಮುಂದೂಡಿಕೆಯಾಗಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್‌ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್‌ ವಿಚಾರಣೆ ನಡೆಸಲಿದೆ.ನ್ಯಾಯ ಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆ ಪೂರ್ಣಗೊಳಲಿದೆ ಎಂದು ಮಾಹಿತಿ ದೊರೆತಿದೆ.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಮಂಡಿಸಿದ ಸುದೀರ್ಘ ವಾದದ ಬಳಿಕ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ಕೆ.ಜಿ.ರಾಘವನ್ ವಾದಮಂಡಿಸಿದ್ದರು.17A ಸಂಬಂಧಿಸಿದಂತೆ ಅನುಮತಿ ಬೇಕೋ, ಬೇಡವೋ ಎಂಬುದರ ಬಗ್ಗೆ ಹಿರಿಯ ವಕೀಲ ಕೆ.ಜಿ ರಾಘವನ್‌ ವಾದ ಮಂಡನೆ ಮಾಡಿದರು. 17-A ಮೇಲೆ ಪ್ರಾಸಿಕ್ಯೂಷನ್‌ಗೆ ಕೊಡುವಾಗ ಪ್ರಕರಣದ ಗಂಭೀರತೆ ಮತ್ತು ದಾಖಲೆ ಇದ್ದರೆ ಸಾಕು, ಪೊಲೀಸ್‌ ಅಧಿಕಾರಿಗಳು ಯಾವುದೇ ಮನವಿ ಕೂಡಾ ಸಲ್ಲಿಸುವ ಅಗತ್ಯವಿಲ್ಲ. ಈ ಪ್ರಕರಣದಲ್ಲಿ ಕೆಲ ತಪ್ಪುಗಳು ಆಗಿವೆ.

ಅಂತಹ ಸಂದರ್ಭವನ್ನು ಸಹ 17-a ಅಡಿಯಲ್ಲಿ ಕೊಡಬಹುದು. The procedures is improper ಹೀಗಾಗಿ ತನಿಖೆ ಆಗಬೇಕು. ಖಾಸಗಿ ದೂರುದಾರ ನೇರವಾಗಿ ಯಾವಾಗ ಹೋಗಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ನೇರವಾಗಿ ಸಂಬಂಧ ಹೊಂದಿಲ್ಲದಿದ್ದರೂ ಸಾರ್ವಜನಿಕ ಸೇವಕರಾಗಿ ಪ್ರಭಾವ ಬೀರಿದರೆ ಅದು ಸೆಕ್ಷನ್‌ 17A ಅಡಿ ಬರುತ್ತದೆ. ಸಿಎಂ ಮಾಡದಿದ್ದರೂ ಅವರ ಪ್ರಭಾವದಿಂದ ಆಗಿದ್ದರೂ ಈ ಕಾಯಿದೆ ಅಡಿಯಲ್ಲಿ ಬರುತ್ತೆ. ಅಧಿಕಾರಿಯನ್ನು ಉಪಯೋಗಿಸಿಕೊಂಡು ಆಗಿದ್ದರೂ ಅದು ಅಧಿಕಾರ ದುರುಪಯೋಗ ಆಗುತ್ತದೆ ಎಂದು ರಾಘವನ್ ವಾದಿಸಿದ್ದರು.

ಒಬ್ಬ ಸಚಿವ ತನ್ನ ಇಲಾಖೆಯಲ್ಲದೇ ಬೇರೆಡೆ ಪ್ರಭಾವ ಬೀರಿದರೂ ಅದು ಅಪರಾಧವೇ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯತೆ ತರಲು ಈ ಕಾಯ್ದೆ ರಚಿಸಲಾಗಿದೆ. 17-a ಇರುವುದೇ ಆಡಳಿತದಲ್ಲಿ ಭ್ರಷ್ಟಾಚಾರ ತಡೆಯುವುದಕ್ಕೆ, ಹೀಗಾಗಿ ಇದನ್ನು ನಾವು ಸಣ್ಣ ವಿಚಾರ ಎಂದು ನೋಡಬಾರದು. ಇದನ್ನು ನಾವು ವಿವರವಾಗಿ ವಿಸ್ತಾರವಾಗಿ ಅರ್ಥ ಮಾಡಿಕೊಳ್ಳಬೇಕು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಬಳಿಕ ನ್ಯಾಯಾಧೀಶರ ತನಿಖೆ ಆಗಬೇಕು. ಇಲ್ಲದಿದ್ದರೆ ಇಂತಹ ವರದಿಗಳು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುತ್ತಾರೆ. ಈ ವೇಳೆ ನೀವು ಕಮೀಷನರ್ ತನಿಖೆಗೆ ಸಮ್ಮತಿ ನೀಡುತ್ತೀರಾ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದಾಗ ಸಾರ್ವಜನಿಕ ವಿಶ್ವಾಸಾರ್ಹತೆಯ ದೃಷ್ಟಿಯಿಂದ ಪ್ರಕರಣವನ್ನು ನೋಡಬೇಕು. ಸರ್ಕಾರ ನ್ಯಾಯಾಂಗ ಆಯೋಗ ರಚಿಸಿರುವುದೇ ತನಿಖೆ ನಡೆಸಬೇಕೆಂದು. ನ್ಯಾಯಾಲಯವು ತನಿಖೆ ನಡೆಸಬೇಕು ಎಂಬುದರ ಪರವಾಗಿರಬೇಕು. ಏಕೆಂದರೆ ಸಾರ್ವಜನಿಕ ಶುಚಿತ್ವ ಕಾಪಾಡುವುದು ಇಲ್ಲಿ ಅಗತ್ಯಇದೆ. ಇಲ್ಲಿ ಕ್ಲೀನ್‌ಚಿಟ್‌ ನೀಡಬಹುದು ಎಂದು ರಾಘವನ್‌ ವಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular