ಬೆಂಗಳೂರು : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್ ಯಾರ ವಿರುದ್ಧ ದಾಖಲಾಗಿರೋದು ..!
ಸಿದ್ದರಾಮಯ್ಯ, ಮುಖ್ಯಮಂತ್ರಿ (A1),ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2) ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3) ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4) ಇತರರು.
ಯಾವೆಲ್ಲ ಕಾಯ್ದೆ, ಐಪಿಸಿ ಸೆಕ್ಷನ್ ಅಡಿ ಎಫ್‌ಐಆರ್?
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.
ಕೊನೆಗೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಮಾರ್ಗದರ್ಶನದಲ್ಲಿ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಖುದ್ದು ತಾವೇ ಮುಂದೆ ನಿಂತು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.