Monday, February 3, 2025
Flats for sale
Homeರಾಜ್ಯಬೆಂಗಳೂರು : ಮೈಕೋ ಕಿರುಕುಳಕ್ಕೆ ನಿಯಂತ್ರಣಕ್ಕೆ ಸಹಕಾರ ಇಲಾಖೆಯಿಂದ ಹೊಸ ಕಾನೂನು ಸಿದ್ಧತೆ,ಮಿತಿ ಮೀರಿ ಬಡ್ಡಿ...

ಬೆಂಗಳೂರು : ಮೈಕೋ ಕಿರುಕುಳಕ್ಕೆ ನಿಯಂತ್ರಣಕ್ಕೆ ಸಹಕಾರ ಇಲಾಖೆಯಿಂದ ಹೊಸ ಕಾನೂನು ಸಿದ್ಧತೆ,ಮಿತಿ ಮೀರಿ ಬಡ್ಡಿ ವಿಧಿಸಿದರೆ 10 ವರ್ಷ ಜೈಲು,1 ಲಕ್ಷ ದಂಡ..!

ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಲು ಮುಂದಾಗಿರುವ ನಡುವೆಯೇ ಮಿತಿಮೀರಿ ಬಡ್ಡಿ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ ತಿದ್ದುಪಡಿಗೆ ಸಹಕಾರ ಇಲಾಖೆಯೂ ಸಿದ್ಧತೆ ನಡೆಸಿದೆ.

ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣ ಹೇರಲು ಇರುವ ಕಾನೂನನ್ನೇ ಪ್ರಯೋಗ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಗ್ರೀವಾಜ್ಞೆ ತರುವ ಅಗತ್ಯತೆಯನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಪ್ರಶ್ನಿಸಿದ್ದು, ಇರುವ ಕಾನೂನನ್ನೇ ಇನ್ನಷ್ಟು ಕಠಿಣಗೊಳಿಸಿದರೆ ಅನಧಿಕೃತ ಹಣಕಾಸು ಸಂಸ್ಥೆಗಳು, ಲೇವಾದೇವಿಗಾರರ ಕಿರುಕುಳಕ್ಕೆ ಅಂಕುಶ ಹಾಕಬಹುದಾಗಿದೆ ಎಂಬುದು ಅವರ ವಾದವಾಗಿದೆ. ಈ ನಿಟ್ಟಿನಲ್ಲಿ ಅವರು ಸಹಕಾರ ಇಲಾಖೆಯ ವ್ಯಾಪ್ತಿಗೆ ಬರುವ ಕಾಯ್ದೆಯನ್ನೇ ಇನ್ನಷ್ಟು ಬಲಪಡಿಸಲು ತಯಾರಿ ನಡೆಸಿದ್ದಾರೆ.

ರಾಜ್ಯದಲ್ಲಿ ಇನ್ನು ಮುಂದೆ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್, ಯಾವುದೇ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಿದ್ದುಪಡಿ ತರಲು ಸಹಕಾರ ಇಲಾಖೆ ಮುಂದಾಗಿದೆ. ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್ ಸೇರಿ ಇತರ ಸಹಕಾರ ಸಂಘಗಳ ಮೇಲೆ ನಿಯಂತ್ರಣ ಹೇರಲು ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004ಕಾಯ್ದೆ ಜಾರಿಯಲ್ಲಿದೆ. ಇದರಡಿ ಮಿತಿಮೀರಿ ಬಡ್ಡಿ ವಿಧಿಸುವವರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ.

ಈಗಿರುವ ಗರಿಷ್ಠ 3 ವರ್ಷ ಶಿಕ್ಷೆ ಪ್ರಮಾಣವನ್ನು ತಿದ್ದುಪಡಿ ತಂದು ಗರಿಷ್ಠ 10 ವರ್ಷಗಳವರೆಗೆ ಹೆಚ್ಚಿಸಲು ಸಿದ್ಧತೆ ನಡೆಸಲಾಗುತ್ತಿದೆ. ಜೊತೆಗೆ ಒಂದು ಲಕ್ಷಕ್ಕೂ ಅಧಿಕ ದಂಡ ವಿಧಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದೆ. ಈ ಸಂಬಂಧ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗಾಗಲೇ ಸಹಕಾರ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪೂರಕ ತಿದ್ದುಪಡಿ ತರಲು ಸಮಾಲೋಚನೆ ನಡೆಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular