ಬೆಂಗಳೂರು : ರಂಜಾನ್ ಆರಂಭ ದಿನದಿಂದ ಹಿಡಿದು 1 ತಿಂಗಳ ಕಾಲ ಉರ್ದು ಶಾಲಾ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಉರ್ದು ಶಾಲೆಯ ವೇಳಾಪಟ್ಟಿ ಬದಲಾಯಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಇದೇ ವೇಳೆ ಇತರ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ.
ರಂಜಾನ್ ತಿಂಗಳಲ್ಲಿ ಉರ್ದು ಶಾಲೆಯ ಸಮಯ ಬದಲಾವಣೆಗೆ ಕೆಲ ಮುಸ್ಲಿಂ ಶಾಸಕರು ಮನವಿ ಮಾಡಿದ್ದರು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಉರ್ದು ಶಾಲೆಗಳ ಸಮಯ ಬದಲಾಯಿಸಿ ಆದೇಶ ಹೊರಡಿಸಲಾಗಿದೆ.ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳಿಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12-45 ದರ ವೆರೆಗೆ ಸಮಯ ನಿಗದಿ ಮಾಡಲಾಗಿದೆ. ಜತೆಗೆ, ರಂಜಾನ್ ತಿಂಗಳಲ್ಲಿ ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.


