ಬೆಂಗಳೂರು : ಯುವಕರಂತೆ ಉತ್ಸಾಹದಿಂದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್‌ಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾ ಎಂಬ ರೋಗದಿಂದ ಬಳಲುತ್ತಿದ್ದು ಅಲ್ಲದೇ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ಸುರೇಶ್ ಕುಮಾರ್ ಮಾತನಾಡಲಾಗದೆ ತೀವ್ರ ಸುಸ್ತಾಗಿದ್ದಾರೆ.ಸುರೇಶ್ ಕುಮಾರ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ನಾಲ್ಕುವರೆ ಲಕ್ಷ ರೂಪಾಯಿಯ ನಾಲ್ಕು ಇಂಜೆಕ್ಷನ್ ನೀಡಲಾಗಿದೆ. ಇನ್ನೂ ಏಳು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಸುರೇಶ್ ಕುಮಾರ್ ಅವರು ಒಂದು ದಿನ ಭಾಗಿಯಾಗಿದ್ದರು. ಇದಾದ ಬಳಿಕ ಕಳೆದ ತಿಂಗಳಿಂದ ಸುರೇಶ್ ಕುಮಾರ್ ಬಹಳ ಆಯಾಸಗೊಂಡಿದ್ದರು ಎನ್ನಲಾಗಿದೆ.