Wednesday, November 5, 2025
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಈದ್ ಮಿಲಾದ್ ಗಣೇಶ ಚತುರ್ಥಿ ಹಬ್ಬದ ವೇಳೆ 'DJ' ನಿಷೇಧ :...

ಬೆಂಗಳೂರು : ರಾಜ್ಯದಲ್ಲಿ ಈದ್ ಮಿಲಾದ್ ಗಣೇಶ ಚತುರ್ಥಿ ಹಬ್ಬದ ವೇಳೆ ‘DJ’ ನಿಷೇಧ : ರಾಜ್ಯ ಸರಕಾರದಿಂದ ಮಹತ್ವದ ಆದೇಶ…!

ಬೆಂಗಳೂರು : ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

ಎರಡು ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ ಈ ಹಿನ್ನೆಲೆ ಸರ್ಕಾರ ನಿರ್ಧರಿಸಿದೆ ಎಂದು ತಿಳಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular