ಬೆಂಗಳೂರು : ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್‌ನಲ್ಲಿ ಅಂತರಿಕ ಭಿನ್ನಮತ ತಾರಕ್ಕೇರಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಕ್ಷೇಪಿಸಿದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು.
ಉಚಿತ ಬಸ್ ಪ್ರಯಾಣ ಯೋಜನೆ ಹೊರತುಪಡಿಸಿ ಗೃಹಲಕ್ಷ್ಮಿ ಯೋಜನೆಯು ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ. ಬರಿಯ ಉಚಿತ ಕೊಡುಗೆಗಳ ಸಂಪನ್ಮೂಲ ಕ್ರೋಡೀಕರಣಕ್ಕೆ ಕಸರತ್ತು ಮಾಡುತ್ತಿದ್ದಾರೆ. ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ. ಉಚಿತವಾಗಿ ವಿದ್ಯುತ್ ಕೊಡುವುದಾಗಿ ಹೇಳಿದವರು ವಿದ್ಯುತ್ದ ರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಬರಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸೇರಿ ಒಬ್ಬರೇ ಒಬ್ಬ ಸಚಿವರೂ ಹೋಗಿ ಅಲ್ಲಿನ ವಾಸ್ತವಿಕ ಸ್ಥಿತಿ ತಿಳಿಯಲಿಲ್ಲ. ಸರಕಾರ ದಿವಾಳಿಯಾಗಿದ್ದು, ಎಂಎಲ್‌ಎ ಅನುದಾನದ ಎರಡು ಕೋಟಿ ಪೈಕಿ ಕೇವಲ ೫೦ ಲಕ್ಷ ಮಾತ್ರ ಬಿಡುಗಡೆ ಮಾಡಿದ್ದಾರೆ. ಪ್ರಮುಖವಾದ ಎಸ್‌ಸಿ, ಎಸ್‌ಟಿ ಯೋಜನೆಗಳ ಅನುಷ್ಠಾನಕ್ಕೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ. ತಾಂಡಾ ನಿಗಮ, ಅಂಬೇಡ್ಕರ್ ನಿಗಮ, ಬೋವಿ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ ಸೇರಿ ಯಾವುದಕ್ಕೂ ಒಂದು ಪೈಸೆ ಹಣ ನೀಡಿಲ್ಲ ಎಂದು ಆರೋಪಿಸಿದರು.
ರೈತರು ಬರಗಾಲದ ಸಂಕಷ್ಟ ಅನುಭವಿಸುವ ಈ ಸಂದರ್ಭದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ಫಾರ್ಮರ್ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರಕಾರ ರದ್ದು ಮಾಡಿದೆ. ಕೃಷಿ ಪಂಪ್‌ಸೆಟ್ ವಿದ್ಯುತ್ ಸಂಪರ್ಕದ ಖರ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಮಾಡಲು ಮುಂದಾಗಿದ್ದಾರೆ ಎAದು ಆಕ್ಷೇಪಿಸಿದರು.
ನಾಯಕತ್ವಕ್ಕಾಗಿ ಕುಸ್ತಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಬಣಗಳ ಜಗ್ಗಾಟ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುAದುವರೆದಿದೆ. ಉಪ ಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಆರಂಭವಾಗಿದೆ. ಬರದ ಸಮಯದಲ್ಲಿ ರಾಜಕೀಯ ಮಾಡದೇ ಕೂಡಲೇ ಪೀಡಿತರ ನೆರವಿಗೆ ಧಾವಿಸಬೇಕಾಗಿತ್ತು. ಕಾಂಗ್ರೆಸ್ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಭೇಟಿ ಕೊಡುತ್ತಿದ್ದು, ಕಾಂಗ್ರೆಸ್ ಪಾಲಿಗೆ ರಾಜ್ಯ ಸರಕಾರ ಎಟಿಎಂನAತಾಗಿದೆ. ಕಲೆಕ್ಷನ್ ಟಾರ್ಗೆಟ್ ನೀಡಲು ರಾಜ್ಯಕ್ಕೆ ಅವರು ಭೇಟಿ ಕೊಡುತ್ತಿದ್ದಾರೆ ಎಂದು ಎಲ್ಲರಿಗೂ ಮನವರಿಕೆ ಆಗಿದೆ ಎಂದು ನುಡಿದರು.
ರೈತರ ಉಚಿತ ಪಂಪ್‌ಸೆಟ್ ಯೋಜನೆ ರದ್ದು.
ಸಂಪನ್ಮೂಲ ಕ್ರೋಡೀಕರಣದಲ್ಲಿ ಸರಕಾರ ವಿಫಲ
ಉಚಿತ ಕೊಡುಗೆಗಳು ಒಂದೇ ತಿಂಗಳಲ್ಲಿ ಸ್ಥಗಿತ
ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಉದಯ್ ಗರುಡಾಚಾರ್ಯ, ಎಸ್.ಆರ್. ವಿಶ್ವನಾಥ್, ಎಸ್ ರಘು, ರವಿಸುಬ್ರಹ್ಮಣ್ಯ, ಎಸ್.ಮುನಿರಾಜು, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಇದ್ದರು.