Thursday, March 12, 2026
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಕೇವಲ 52 ಲಕ್ಷ ವಾಹನಗಳಿಗಷ್ಟೇ HSRP ನಂಬರ್ ಪ್ಲೇಟ್ ಅಳವಡಿಕೆಗೆ, ಸೆ....

ಬೆಂಗಳೂರು : ರಾಜ್ಯದಲ್ಲಿ ಕೇವಲ 52 ಲಕ್ಷ ವಾಹನಗಳಿಗಷ್ಟೇ HSRP ನಂಬರ್ ಪ್ಲೇಟ್ ಅಳವಡಿಕೆಗೆ, ಸೆ. 15ರ ವರೆಗೆ ನೀಡಿದ ಡೆಡ್​​ಲೈನ್ ಮುಕ್ತಾಯ ,ದಂಡ ವಿಧಿಸಲು ಸಾರಿಗೆ ಇಲಾಖೆ ತಯಾರಿ ..!

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಇಲಾಖೆಯು 2019ರ ಏಪ್ರಿಲ್ 1 ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್​​ನಲ್ಲಿ ಹೊರಡಿಸಿತ್ತು. ಆರಂಭದಲ್ಲಿ 2023 ರ ನವೆಂಬರ್ 17 ರ ಗಡುವನ್ನು ನಿಗದಿಪಡಿಸಲಾಗಿತ್ತು ಆದಾಗ್ಯೂ, ನಿಧಾನಗತಿಯ ಅಳವಡಿಕೆಯ ಕಾರಣ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿತ್ತು.ಆದರೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ HSRP ಅಳವಡಿಕೆಗೆ ಕೊನೆಯ ದಿನ ಸೆಪ್ಟೆಂಬರ್ 15 ಆಗಿದ್ದು, ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 15ರ ನಂತರ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ ವಾಹನ ಚಾಲಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಸೆಪ್ಟೆಂಬರ್ 18ರ ನಂತರವೇ ಕೈಗೊಳ್ಳುತ್ತೇವೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಇಲಾಖೆ ಅಂಕಿಅಂಶ ಪ್ರಕಾರ, ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ 26ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ವಾಹನ ಮಾಲೀಕರ ನೀರಸ ಪ್ರತಿಕ್ರಿಯೆಯಿಂದಾಗಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ಈ ಹಿಂದೆ ಹಲವಾರು ಬಾರಿ ವಿಸ್ತರಿಸಲಾಗಿತ್ತು. ಇನ್ನುಳಿದ ಜನಸಾಮಾನ್ಯರಿಗೆ ನಂಬರ್ ಪ್ಲೇಟ್ ಬಗ್ಗೆ ಸರಿಯಾದ ಮಾಹಿತಿ ಹಾಗೂ ಬೆಲೆ ಕೂಡ ಹೆಚ್ಚಾಗಿರುವುದರಿಂದ ನೀರಸ ಪ್ರತಿಕ್ರಿಯೆ ನೀಡಿದಾರೆಂದು ತಿಳಿದುಬಂದಿದೆ. ನಿಯಮದ ಪ್ರಕಾರ ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 16ರಿಂದ 500 ರೂ. ದಂಡ ವಿಧಿಸಲಾಗುತ್ತದೆ. ಆದರೆ, ಸೆಪ್ಟೆಂಬರ್ 18ರ ವರೆಗೆ ಬಲವಂತದ ಕ್ರಮ ಇಲ್ಲ ಎಂದಿದ್ದಾರೆ.ಒಟ್ಟಿನಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಣೆ ಬಗ್ಗೆ ಸೆಪ್ಟೆಂಬರ್ 18 ಹೈಕೋರ್ಟ್ ವಿಚಾರಣೆಯ ನಂತರವೇ ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular