Friday, November 22, 2024
Flats for sale
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ: ಸಿ .ಎಂ ಸಿದ್ದರಾಮಯ್ಯ.

ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ: ಸಿ .ಎಂ ಸಿದ್ದರಾಮಯ್ಯ.

ಬೆಂಗಳೂರು : ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ʼʼಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ, ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಕೇಂದ್ರ ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿರುವುದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆʼʼ ಎಂದು ಸಿಎಂ ಹೇಳಿದ್ದಾರೆ.

”ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಜನಕಲ್ಯಾಣ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ .

ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ. ಭಾರತ ದೇಶವು ಬ್ರಿಟಿಷರ ಸಾಮ್ರಾಜ್ಯದಿಂದ ಮುಕ್ತಗೊಂಡ ದಿನವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ರಸ್ತೆಗಳಲ್ಲಿ ಶಾಲಾ ಮಕ್ಕಳ ಪ್ರಭಾತ್ ಫೇರಿ ನೋಡಿದವರಲ್ಲಿ ರಾಷ್ಟ್ರಾಭಿಮಾನ ಉಕ್ಕುತ್ತಿದೆ. ದೊಡ್ಡ ದೊಡ್ಡ ಸೌಂಡ್ ಬಾಕ್ಸ್ ಮತ್ತು ಸ್ಪೀಕರ್ ಗಳಲ್ಲಿ ಕೇಳಿಬರುತ್ತಿರುವ ದೇಶಭಕ್ತಿ ಗೀತೆಗಳು ಮನಸ್ಸಿಗೆ ಮುದ ನೀಡುತ್ತಿವೆ. ಏತನ್ಮಧ್ಯೆ, ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ಹೊತ್ತಿಗೆ ಮುಂಚೆ ಧ್ವಜಾರೋಹಣಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ಆಗಮಿಸಿದರು. ಅದಾಗಲೇ ಕಚೇರಿಗೆ ಆಗಮಿಸಿದ್ದ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ನಾಯಕರು ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು. ವಿರೋಧ ಪಕ್ಷಗಳ ನಾಯಕರ ಆರೋಪಗಳು, ಪ್ರತಿಭಟನೆ ಮತ್ತು ಪಾದಯಾತ್ರೆಗಳಿಂದ ಮನಶ್ಶಾಂತಿ ಕಳೆದುಕೊಂಡಿರುವ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಗೆ ನಗುಮೊಗದಿಂದಲೇ ಆಗಮಿಸಿದರು.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ಬಗ್ಗೆ ಸಿಎಂ ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯವಾಗ್ತಿದೆ. ಕೇಂದ್ರ ಸರ್ಕಾರ ಸಂವಿಧಾನದ ಆಶಯಗಳನ್ನ ನಿರ್ಲಕ್ಷಿಸಿದೆ ಎಂದರು.

ರಾಜ್ಯಕ್ಕೆ ದೊರೆಯಬೇಕಾದ ಹಣಕಾಸಿನ ಪಾಲು ನೀಡಲು ಕೇಂದ್ರ ಮೀನಮೇಷ ಎಣಿಸುತ್ತಿದೆ. ಹಣ ಪಡೆಯಲು ಕೋರ್ಟ್​ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ. ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆಗೆ ಸಿಎಂ ಒತ್ತಾಯ ಮಾಡಿದರು.

ರಾಜ್ಯದ ಸಮಸ್ತ ಜನರ ಪರವಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಮತದಾರರು ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲವೆಂಬ ಸಂದೇಶ ರವಾನೆ ಮಾಡಿದ್ದಾರೆ ಎಂದು ಮಾಣೆಕ್ ಷಾ ಪರೇಡ್​​ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬರಪೀಡಿತ ಜಿಲ್ಲೆಗಳ ಪ್ರತಿ ರೈತರಿಗೆ $2000ನಂತೆ 636.45 ಕೋಟಿ ಮಧ್ಯಂತರ ಪರಿಹಾರ ನೀಡಿದ್ದೇವೆ. ಪಶ್ಚಿಮ ಘಟ್ಟಗಳ ಜಿಲ್ಲೆಗಳ ಪರಿಸರ ಅಭಿವೃದ್ಧಿ ಸಮತೋಲನಕ್ಕೆ 100 ಕೋಟಿ ಮೊತ್ತದಲ್ಲಿ ಉಪಶಮನ ಕ್ರಮಗಳ ಜಾರಿ ಮಾಡಿದ್ದೇವೆ. ನಮ್ಮ ಸರ್ಕಾರ ಕೇವಲ ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ. ಮೈತ್ರಿ ಯೋಜನೆಯಡಿ ಪಿಂಚಣಿ ಮೊತ್ತ ಹೆಚ್ಚಿಸಲಾಗಿದೆ. ಹಾಲು ಉತ್ಪಾದಕರ ಖಾತೆಗೆ ಪ್ರೋತ್ಸಾಹ ಹಣ ನೀಡಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ 463.11 ಕೋಟಿ ನೀಡಿದ್ದೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular