ಬೆಂಗಳೂರು : ರಾಜ್ಯದಲ್ಲಿ ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ನಿಷೇಧ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲೆ, ಮೇಕೆದಾಟು ಯೋಜನೆ,ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆದ್ಯತೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾಜಿ ಶಾಸಕ ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪುರಭವನದಿಂದ ಫ್ರೀಡಂಪಾರ್ಕ್ ಕನ್ನಡ ಪರ ಸಂಘಟನೆಗಳು ಬೃಹತ್ ಪ್ರತಿಭಟನೆನಡೆಸಲು ಮುಂದಾದಾಗ ಪೊಲೀಸರು ಪ್ರತಿಭಟನೆಗೆ ಅವಕಾಶ ಕೊಡದೆ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್,ಮುಖಂಡರಾದ ಸಾ.ರಾ.ಗೋವಿಂದು ಕನ್ನಡ ಸೇನೆಯ ಕುಮಾರ್, ಪ್ರವೀಣ್‌ಶೆಟ್ಟಿ, ಶಿವರಾಮೇಗೌಡ ಸೇರಿದಂತೆ ಇನ್ನಿತರ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಆನಂದ್‌ರಾವ್ ವೃತ್ತದ ಬಳಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳು ಎಂದಿನಂತೆ ಸಂಚರಿಸುತ್ತಿವೆ. ಬೆಂಗಳೂರಿನಲ್ಲೂ ಬಸ್, ಮೆಟ್ರೊ, ಆಟೊಗಳ ಸಂಚಾರಕ್ಕೆ ಯಾವುದೇ ಅಡ್ಡಿಯುಂಟಾಗಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ರಾಜಧಾನಿ ಬೆಂಗಳೂರಿನಲ್ಲೂ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವೆಡೆ ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದವು. ಬಸ್ ಸೇರಿದಂತೆ ವಾಹನ ಸಂಚಾರ ಸುಗಮವಾಗಿ ನಡೆದಿದ್ದು, ಜನಜೀವನ ಎಂದಿನಂತೆ ನಡೆದಿದೆ.