ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,ಇಂದಿನಿಂದ ಕೋವಿಡ್ ಪರೀಕ್ಷೆಯನ್ನು ಆರಂಭಿಸಲು ಮುAದಾಗಿದೆ.
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಿನ್ನೆ ಸಭೆ ನಡೆಸಿದ್ದ ಕೋವಿಡ್ ತಾಂತ್ರಿಕ ಸಮಿತಿ ಕೋವಿಡ್ ಪರೀಕ್ಷೆಗಳನ್ನು ಪುನಾರಂಭಿಸಲು ಶಿಫಾರಸ್ಸು ಮಾಡಿದ್ದು, ಅದರಂತೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಟೆಸ್ಟ್ಗಳನ್ನು ಆರಂಭಿಸಲು ಮುಂದಾಗಿದ್ದು, ಪರೀಕ್ಷೆ ಲ್ಯಾಬ್‌ಗಳನ್ನು ಪುನಾರಂಭಿಸಲು ನಿರ್ಧರಿಸಿದೆ.
ರಾಜ್ಯದ ವಿವಿಧೆಡೆ 8 ಆರ್‌ಟಿಪಿಸಿಆರ್ ಪರೀಕ್ಷೆ ಲ್ಯಾಬ್‌ಗಳನ್ನು ಆರಂಭಿಸುವ ನಿರ್ಧಾರ ಮಾಡಲಾಗಿದೆ. ರಾಜ್ಯದ ಆಯ್ದ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗಳ ಆರಂಭಕ್ಕೆ ಸಿದ್ಧತೆ ನಡೆದಿದ್ದು, ನಾಳೆಯಿಂದಲೇ ಕೋವಿಡ್ ಪರೀಕ್ಷೆಗಳು ಆರಂಭವಾಗಲಿದೆ.
ಸಾರಿ ಕೇಸ್‌ಗಳಿಗೆ ಪರೀಕ್ಷೆ ಕಡ್ಡಾಯ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿಆರಂಭಿಕವಾಗಿ ಉಸಿರಾಟದ ತೊಂದರೆ, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಇಂದು ಸಂಜೆಯೊಳಗೆ ಸುತ್ತೋಲೆಯನ್ನು ಹೊರಡಿಸಲಾಗುವುದು, ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಇದುವರೆಗೂ ೩೫ ಕೋವಿಡ್ ಸಕ್ರಿಯ ಪ್ರಕರಣಗಳಿದ್ದು,ಅದರಲ್ಲಿ ಬೆಂಗಳೂರಿನಲ್ಲೇ ೩೨ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇಂದೂ ಸಹ ಬೆಂಗಳೂರಿನಲ್ಲಿ ಮೂವರಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ
ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಸAಬAಧ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ಕೊರೊನಾ ಸೋಂಕು ಹೆಚ್ಚಳದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದೆ. ಇಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಸಹ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಮಾರ್ಗಸೂಚಿ ಬಿಡುಗಡೆ, ಮಾಸ್ಕ್ ಧರಿಸಲು ಸಲಹೆ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ ಓಡಾಡುವಂತೆ ಹಾಗೂ ನೈರ್ಮಲ್ಯ ಕಾಪಾಡಲು ಸ್ಯಾನಿಟೈಸರ್‌ಗಳನ್ನು ಬಳಸುವಂತೆ ಸಾರ್ವಜನಿಕರಿಗೆ ಸಲಹೆ ಮಾಡಿದೆ.
ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಮಹಾರಾಷ್ಟçದಲ್ಲಿ ಮೂರು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದ್ದು ಮಹಾರಾಷ್ಟç, ದೆಹಲಿ, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಂಡಿದ್ದು, ಆAಧ್ರದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ದೆಹಲಿ, ಮಹಾರಾಷ್ಟçದಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಸರ್ಕಾರ ಸಹ ಕೋವಿಡ್ ಮಾರ್ಗಸೂಚಿಗಳನ್ನುಪ್ರಕಟಿಸಿದೆ.
ರಾಜ್ಯದಲ್ಲಿ 2025 ರಲ್ಲಿ ಕೋವಿಡ್ ಸಂಬAಧಿತ ಸಾವುಗಳು ವರದಿಯಾಗಿಲ್ಲ. ಆದರೂ ಸೋಂಕು ಹರಡುವುದನ್ನು ತಡೆಯಲು ಎಚ್ಚರಿಕೆ ಅವಶ್ಯ. ಹಾಗಾಗಿ ಗರ್ಭಿಣಿಯರು, ಮಕ್ಕಳು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು, ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ ಓಡಾಡಲು ಆರೋಗ್ಯ ಇಲಾಖೆ ಸಲಹಾರೂಪದ ಸೂಚನೆ ನೀಡಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ. ತೀವ್ರ ಉಸಿರಾಟದ ಕಾಯಿಲೆಗಳ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -೧೯ ಪರೀಕ್ಷೆಯನ್ನು ತಕ್ಷಣವೇ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ.


