ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ರಾಜ್ಯದಲ್ಲಿ 2 ಲಕ್ಷದ 40 ಸಾವಿರಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ.
ಅನರ್ಹರ ಪಡಿತರ ಚೀಟಿಗಳನ್ನು ರದ್ದು ಮಾಡುವ ವೇಳೆ ಅರ್ಹರ ಪಡಿತರ ಚೀಟಿಗಳು ರದ್ದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ಮುಗಿ
ಬಿದಿದ್ದಾರೆ.
ಅರ್ಹರ ಪಡಿತರ ಚೀಟಿಗಳು ರದ್ದಾಗಿದ್ದರೆ ಅದನ್ನು ಪತ್ತೆ ಮಾಡಿ ಮತ್ತೆ ಅವರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಎಕ.ಶಿವಕುಮಾರ್ ಹೇಳಿದ್ದಾರೆ. ಅನರ್ಹರ ಹೆಸರಿನಲ್ಲಿ ಅರ್ಹರ ಪಡಿತರ ಚೀಟಿಗಳು ರದ್ದಾಗಿವೆ. ಪಡಿತರ ಪೂರೈಕೆ ಮಾಡಲು ಸರ್ಕಾರದ ಬಳಿ ಹಣ ಇಲ್ಲದ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳನ್ನು ರದ್ದು ಮಾಡಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಸರ್ಕಾರಿ ನೌಕರರು ರಾಜ್ಯದಲ್ಲಿ ತೆರಿಗೆ ಪಾವತಿ ಮಾಡುವವರು ಹಾಗೂ ಉತ್ತಮ ಆಸ್ತಿ ಹೊಂದಿರುವವರು ಹಾಗೂ ಸರ್ಕಾರಿ ಅಧಿಕಾರಿಗಳು ಬಿಪಿಎಲ್ ಪಡಿತರ ಚೀಟಿ ಪಡೆದಿರುವುದು ಬೆಳಕಿಗೆ ಬಂದಿದೆ. ಈಗಾಗಲೇ ಇಲಾಖೆ ಎಪಿಎಲ್ ಪಡಿತರ ಚೀಟಿ ಪಡೆದಿರುವ ಸರ್ಕಾರಿ ಅಧಿಕಾರಿಗಳನ್ನು ಪತ್ತೆ ಮಾಡಿ ಅವರ ಕಾರ್ಡುಗಳನ್ನು ರದ್ದುಪಡಿಸಿದೆ. ಅಲ್ಲದೆ ಅವರು ಇಲ್ಲಿವರೆಗೆ ಪಡೆದ ಆಹಾರ ಧಾನ್ಯದ ಮೌಲ್ಯವನ್ನು ಲೆಕ್ಕ ಹಾಕಿ ದಂಡ ವಿಧಿಸಿದೆ. ಈಗ ತೆರಿಗೆ ಪಾವತಿ ಮಾಡುವವರು ಹಾಗೂ ಶ್ರೀಮಂತರ ಕಾಡುಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿ 2. 40 ಲಕ್ಷದಷ್ಟು ಕಾರ್ಡುಗಳನ್ನು ರದ್ದು ಮಾಡಿದೆ.