Monday, May 11, 2026
Flats for sale
Homeರಾಜ್ಯಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ : 293 ಇನ್ಸ್‌ಪೆಕ್ಟರ್‌, 74 ಡಿವೈಎಸ್‌ಪಿಗಳಿಗೆ...

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ : 293 ಇನ್ಸ್‌ಪೆಕ್ಟರ್‌, 74 ಡಿವೈಎಸ್‌ಪಿಗಳಿಗೆ ಹೊಸ ನಿಯೋಜನೆ.

ಬೆಂಗಳೂರು : ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದ್ದು, 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು (ಸಿವಿಲ್) ಹಾಗೂ 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳಲ್ಲಿ ಬಹುತೇಕರು ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಪ್ರಮುಖ ನಗರಗಳ ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜನೆಗೊಂಡಿದ್ದಾರೆ.

ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹ ದಳ ಹಾಗೂ ವಿಶೇಷ ತನಿಖಾ ತಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ಅನುಭವಿ ಅಧಿಕಾರಿಗಳನ್ನು ಕ್ರೈಂ ಬ್ರಾಂಚ್ ಮತ್ತು ಗುಪ್ತಚರ ವಿಭಾಗಗಳಿಗೆ ನೇಮಕ ಮಾಡಲಾಗಿದೆ. ಪ್ರಮುಖವಾಗಿ ಸೂರ್ಯನಗರ, ಮಡಿವಾಳ ಮತ್ತು ಚಂದ್ರಾ ಲೇಔಟ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನೂ ಬದಲಾವಣೆ ಮಾಡಲಾಗಿದೆ.

ಡಿವೈಎಸ್‌ಪಿ ಮಟ್ಟದಲ್ಲೂ ಬದಲಾವಣೆ : ಇನ್ಸ್‌ಪೆಕ್ಟರ್‌ಗಳ ಜೊತೆಗೆ 74 ಡಿವೈಎಸ್‌ಪಿ ಅಧಿಕಾರಿಗಳಿಗೂ ಹೊಸ ಜವಾಬ್ದಾರಿಗಳನ್ನು ನೀಡಲಾಗಿದೆ. ಬೆಂಗಳೂರು ನಗರ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ ಹಾಗೂ ವಿವಿಧ ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.

ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ಹೊಸ ನಿಯೋಜಿತ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular