ಬೆಂಗಳೂರು ; ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನಸಾಮಾನ್ಯರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಶಾಕ್ ಕೊಡುತ್ತಾನೆ ಇದೆ. ಬರದಿಂದ ತತ್ತರಿಸಿ ಕೊಂಚ ಎದ್ದೆಳುವ ಸಮಯದಲ್ಲಿ ಮತ್ತೊಂದು ಶಾಕ್ ನೀಡಿದೆ. ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಕೆಲವು ತಿಂಗಳ ಹಿಂದೆ ಹೇಳಿದ್ದರು. ಆದರೆ, ಇದೀಗ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಹಾಲಿನ ದರ ಏರಿಕೆ ಮಾಡಲಾಗಿದೆ. ಇದು ಸಹಜವಾಗಿ ಮಧ್ಯಮ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.
ಈ ಸರಕಾರ ರಾಜ್ಯದಲ್ಲಿ ಅಧಿಕಾರಿಕ್ಕೆ ಬಂದ ನಂತರ ಅಶ್ವಾಸನೆ ನೀಡಿದ ಉಚಿತ ಭಾಗ್ಯಗಳಿಗೆ ಹಣ ಹೊಂದಿಸಲು ವಿಫಲವಾಗಿದ್ದು ಪೆಟ್ರೋಲ್ ,ಡಿಸಿಲ್ ದರ ಹೆಚ್ಚಳ ಮಾಡಿ ಇನ್ನೆನು ಕೆಲವೆ ದಿನಗಳಾಗಿದ್ದು ಮಾಧ್ಯಮ ವರ್ಗದ ಜನರ ಬದಿಕಿಗೆ ಬರೆ ಎಳೆದಂತಾಗಿದೆ.