ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ರನ್ನು ಬಂಧಿಸಲಾಗಿದೆ ಎಂದು ಸುದ್ದಿಯಾಗುತ್ತಿದ್ದಂತೆ ಖುಷಿಯಲ್ಲಿ ಕಾಂಗ್ರೆಸ್ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್‌ನ ಹ್ಯಾಂಡಲ್‌ಗಳು ಕೂಡ ಈ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಪಾತ್ರವಿದೆ ಎಂದೂ ಟ್ವೀಟ್ ಮಾಡಿದ್ದಾರೆ.ಆದರೆ ಮಹತ್ವದ ಗೊಂದಲವನ್ನು ಎನ್‌ಐಎ ಸ್ಪಷ್ಟ ಪಡಿಸಿದ್ದು ಸಾಕ್ಷಿಯಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ಈ ಬಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದು ಮತಿನ್ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್‌ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ .ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.
ಇನ್ನೂ ದೇಶದ 18 ಕಡೆ ದಾಳಿ ಮಾಡಿ ಎನ್‌ಐಎ ಪರಿಶೀಲನೆ ಮಾಡಿದ್ದು, ಈಗಾಗಲೆ ಇಬ್ಬರು ಆರೋಪಿಗಳ ಸುಳಿವು ಕೊಟ್ಟವರಿಗೆ ತಲಾ 10 ಲಕ್ಷ ಬಹುಮಾನ ಘೋಷಣೆ ಮಾಡಿದೆ. ಜೊತೆಗೆ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ನಡೆಸುತ್ತಿದೆ.
ಒಟ್ಟಾರೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿ ಇಡೀ ರಾಜ್ಯವನ್ನೇ ಆತಂಕಕ್ಕೆ ತಳ್ಳಿದ್ದ ಉಗ್ರನ ಬಂಧನಕ್ಕೆ ಎನ್‌ಐಎ ಮುಂದಾಗಿದೆ.. ಉಗ್ರನ ರಣಬೇಟೆಯಾಡಲು ಸಜ್ಜಾಗಿದೆ.
ತನಿಖೆಯ ಭಾಗವಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ಮಾಡಲಾಗುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು NIA ಮನವಿ ಮಾಡಿದೆ.