ಬೆಂಗಳೂರು : ಸರ್ಕಾರದ ಆರನೇ ಗ್ಯಾರಂಟಿ ಅಂದರೆ ಅದು ರೈತರ ಆತ್ಮಹತ್ಯೆ. ಆತ್ಮಹತ್ಯೆ ಅನ್ನುವ ಆರನೇ ಗ್ಯಾರಂಟಿ ಕೊಟ್ಟಿದ್ದಾರೆ. ಇದು ಬಡವರ ಸರ್ಕಾರವೇನು ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ;ಲಿ ಮಾತನಾಡಿದ ಅವರು, ಚಳಿಗಾಲ ಶುರುವಾಗುತ್ತಿದೆ. ಮಳೆಗಾಲ ಹೋಯ್ತು. ಇನ್ನೇನು ಬೆಳೆಯಲು ಸಾಧ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಎರಡೂ ಇಲ್ಲ. ಜನತಾ ದಳ ಮುಗಿದೋಯ್ತು ಅಂತಾ ಇದ್ದಾರೆ ಅಷ್ಟೇ. ಇಂಥ ದುಸ್ಥಿತಿ ಯಾವತ್ತೂ ಬಂದಿಲ್ಲ ಎಂದು ಕಿಡಿಕಾರಿದರು.
ಕೃಷಿ ಕ್ಷೇತ್ರ ಅಭಿವೃದ್ಧಿ ಆಗದೇ ದೇಶ ಉದ್ಧಾರ ಆಗಲ್ಲ. ಈ ಮೂಲಕ ರೈತರು ಉದ್ಧಾರ ಆಗಬೇಕು. ನೀವು ಬಂದು ಐದು ತಿಂಗಳಾಗಿದೆ. ಸರ್ಕಾರದ ವರದಿ ಪ್ರಕಾರ ೪ ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ೪೦ ಲಕ್ಷ ಹೆಕ್ಟೇರ್ ನಷ್ಟು ಬೆಳೆ ಒಣಗಿದೆ ಎಂದು ವರದಿ ಕೊಟ್ಟಿದ್ದಾರೆ.
ಹಿಂದೆAದೂ ಕಂಡರಿಯದ ಬರಗಾಲ ಇದೆ. ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಪಿಎಂ ಕಿಸಾನ್ ಯೋಜನೆ ಅಡಿ, ರಾಜ್ಯ ಸರ್ಕಾರ ನೀಡುತ್ತಿದ್ದ ನಾಲ್ಕು ಸಾವಿರ ಹಣ ನಿಲ್ಲಿಸಿದ್ದಾರೆ. ಇಷ್ಟೆಲ್ಲ ಮಾಡಿ ಈಗ ರೈತರ ಬಗ್ಗೆ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಮಾಡಲು ಸಾಧ್ಯವಾಗ್ತಾ ಇಲ್ಲ, ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿ ಹೇಳುತ್ತಿದ್ದರು. ಆದರೆ,ಸರ್ಕಾರ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಟೀಕಾಪ್ರಹಾರ ಮಾಡಿದರು.
ರಾಜ್ಯ ಅಕ್ಕಿ ಕೊಡುತ್ತಿಲ್ಲ ಕೇಂದ್ರ ಸರ್ಕಾರ ಕೊಟ್ಟ ಅಕ್ಕಿಯನ್ನು ಜನ ಊಟ ಮಾಡುತ್ತಿದ್ದಾರೆ. ೨೦೦ ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿ ೫೮ ಯೂನಿಟ್ ಉಚಿತವಾಗಿ ನೀಡಲಾಗುತ್ತಿದೆ. ಹಳ್ಳಿ ಜನ ಹೊಲದಲ್ಲಿ ಮನೆ ಕಟ್ಟಿಕೊಂಡರೆ ಅಲ್ಲಿ ನಿರಂತರ ಜ್ಯೋತಿ ಸಿಗುವುದಿಲ್ಲ. ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ರೈತರಿಗೆ, ಜನರಿಗೆ ಧೈರ್ಯ ತುಂಬಿಲ್ಲ. ರೈತರ ಸ್ಥಿತಿ ರಾಜ್ಯದಲ್ಲಿ ಜೀವನ್ಮರಣದ ಪರಿಸ್ಥಿತಿ ಉಂಟಾಗಿದೆ.
ಎದೆಗಾರಿಕೆ ತೋರಿಸುತ್ತಿಲ್ಲ: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡೂವರೆ ವರ್ಷ ಮುಖ್ಯಮಂತ್ರಿಯಾಗುತ್ತೇನೆAದು ಹೇಳುವ ಎದೆಗಾರಿಕೆ ತೋರುತ್ತಿಲ್ಲ. ಶಿವಕುಮಾರ್ ಅವರು ಉತ್ತರನ ಪೌರುಷವಿದ್ದಂತೆ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗುವ ಹೇಳಿಕೆಯ ಧೈರ್ಯವೂ ತೋರಲಿಲ್ಲ.
ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರು, ಎಸ್‌ಎಂ ಕೃಷ್ಣ, ಡಿವಿ ಸದಾನಂದ ಗೌಡ, ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಒಮ್ಮೆ ಅವಕಾಶ ಕೊಡಿ ನಾನು ಸಿಎಂ ಆಗುತ್ತೇನೆ ಎಂದು ಕೋರಿದ್ದರು. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಉಪಮುಖ್ಯಮಂತ್ರಿ ಆಗಿದ್ದಾರೆ ಎಂದು ಲೇವಡಿ ಮಾಡಿದರು.