ಬೆಂಗಳೂರು : ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದು ಬಂಧಿಸಿ ವಶಕ್ಕೆ ಪಡೆದು ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಹೆಚ್.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು. ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್ ಮಾಡಿದ್ದಾರೆ.


