Thursday, November 21, 2024
Flats for sale
Homeರಾಜಕೀಯಬೆಂಗಳೂರು : ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಗೆ ಪ್ರಶ್ನೆಗಳ ಸುರಿಮಳೆ ..!

ಬೆಂಗಳೂರು : ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಗೆ ಪ್ರಶ್ನೆಗಳ ಸುರಿಮಳೆ ..!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣ
ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಪೊಲೀಸರು ಇಂದು ವಿಚಾರಣೆಗೆ ಒಳಪಡಿಸಿದರು.

ಬೆಂಗಳೂರಿನಿಂದ ಇಂದು ಬೆಳಿಗ್ಗೆ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೈಸೂರು ಪೊಲೀಸರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕೇಳಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ನನ್ನ ಉತ್ತರಗಳನ್ನು ಲೋಕಾಯುಕ್ತ ಪೊಲೀಸರು ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಮೈಸೂರಿನಲ್ಲಿAದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪೊಲೀಸರು ಏನೆಲ್ಲ ಪ್ರಶ್ನೆ ಕೇಳಿದ್ದಾರೋ ಅದಕ್ಕೆಲ್ಲ ಉತ್ತರ ಕೊಟ್ಟಿದ್ದೇನೆ. ನನ್ನ ಉತ್ತರಗಳನ್ನು ದಾಖಲು ಮಾಡಿಕೊಂಡಿದ್ದಾರೆ ಎಂದರು.

ಬಿಜೆಪಿಯವರು ಈ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ತನಿಖೆಗೆ ಪುಟ ೨೭ ಗೌರವ ವಂದನೆ ಸ್ವೀಕರಿಸಿದ ನಂತರ ನೇರವಾಗಿ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಒಳಪಟ್ಟರು. ಮೈಸೂರು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದಾರೆ.

ಮುಡಾದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ರಾಜ್ಯದ ಇತಿಹಾಸದಲ್ಲೇ ಹಾಲಿ ಮುಖ್ಯಮಂತ್ರಿಯೊಬ್ಬರು ಲೋಕಾಯುಕ್ತ ವಿಚಾರಣೆ ಎದುರಿಸಿರುವುದು ಇದೇ ಮೊದಲು, ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಲೋಕಾಯುಕ್ತ ಪೊಲೀಸರು ಮೊದಲೇ ಸಿದ್ಧಪಡಿಸಿಕೊಂಡಿದ್ದ ಹಲವು ಪ್ರಶ್ನೆಗಳನ್ನು ಕೇಳಿ ಆ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಗಳನ್ನು ದಾಖಲು ಮಾಡಿಕೊಂಡರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಈಗಾಗಲೇ ಈ ಪ್ರಕರಣದಲ್ಲಿ ೨ನೇ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, 3 ನೇ ಆರೋಪಿ ಅವರ ಭಾಮೈದ ಮಲ್ಲಿಕಾರ್ಜುನಸ್ವಾಮಿ, ಜಮೀನು ಮಾಲೀಕ ದೇವರಾಜ್ ಅವರ ವಿಚಾರಣೆ ನಡೆಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಬಾಕಿ ಇದ್ದು, ಇಂದು ಮುಖ್ಯಮAತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಗುರಿಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಂಡರು.ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಲು ಹಲವು ಪ್ರಶ್ನೆಗಳನ್ನು ಸಿದ್ದಪಡಿಸಿಕೊಂಡಿದ್ದು, ಅದರಂತೆ ಒಂದೊಂದೇ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.

ಸುಮಾರು ೨ ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಯಿತು. ನಿಮ್ಮ ಪತ್ನಿಗೆ ಮುಡಾದಿಂದ ೧೪ ನಿವೇಶನ ಹಂಚಿಕೆಯಾಗಿರುವ ಬಗ್ಗೆ ನಿಮಗೆ ಗೊತ್ತಿದೆಯೇ?ನಿಮ್ಮ ಪ್ರಭಾವ ಬಳಸಿ ಈ ನಿವೇಶನಗಳನ್ನು ಮಂಜೂರು ಮಾಡಿಸಿದ್ದೀರಾ? ನಿಮ್ಮ ಪತ್ನಿಗೆ ನಿವೇಶನ ನೀಡಿದ ಸ್ಥಳವನ್ನು ನೀವು ವೀಕ್ಷಣೆ ಮಾಡಿದ್ದೀರಾ? ಮುಡಾ ನಿವೇಶನ ಹಂಚಿಕೆ ಹಗರಣ ಬಯಲಾಗುತ್ತಿದ್ದಂತೆಯೇ ನಿಮ್ಮ ಪತ್ನಿಗೆ ನಿವೇಶನ ವಾಪಸ್ ಮಾಡಲು ನೀವೇ ಸಲಹೆ ಮಾಡಿದ್ದೀರಾ? ಮುಡಾ ವಶಪಡಿಸಿಕೊಂಡಿರುವ ಜಮೀನಿಗೆ ಹಣ ನೀಡಿದರೆ ನಿವೇಶನ ವಾಪಸ್ ಕೊಡುತ್ತೇವೆ ಎಂದು ಹೇಳಿದ್ದಕ್ಕೆ ಕಾರಣ ಏನು? ಈ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಮ್ಮ ಪತ್ನಿ, ಮಗನ ಪಾತ್ರ ಏನು? ನೀವು ಅಧಿಕಾರದಲ್ಲಿದ್ದಾಗಲೇ ನಿವೇಶನ ಹಂಚಿಕೆಗೆ ಪ್ರಭಾವ ನಡೆದಿತ್ತೆ? ನೀವು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದೀರಾ ಎಂಬ ಆರೋಪ ಇದೆ. ನಿಮ್ಮ ಭಾಮೈದ ನಿಮ್ಮ ಪತ್ನಿಗೆ ಭೂಚಿಯನ್ನು ಹರಿನ-ಕುಂಕುಮಕ್ಕೆ ದಾನ ಕೊಟ್ಟ ಬಗ್ಗೆ ನಿಮಗೆ ಮಾಹಿತಿ ಇತ್ತಾ? ಭೂಮಿಯ ವಿಬಾದ ನಿಮಗೆ ಯಾವಾಗ ಗೊತ್ತಾಯಿತು? ಈ ಪ್ರಕರಣದ ಬಗ್ಗೆ ಒಟ್ಟಾರೆ ನಿಮ್ಮ ಬಳಿ ಇರುವ ಮಾಹಿತಿ ಏನು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಕಿ ಅವರ ಉತ್ತರಗಳನ್ನು ಪಡೆದುಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಲೋಕಾಯುಕ್ತ ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿತ್ತು, ಮೂರು ಸುತ್ತಿನ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದ್ದು, 500 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಲೋಕಾಯುಕ್ತ ಕಚೇರಿಯಲ್ಲಿ,ಲೋಕಾಯುಕ್ತ ಕಂಪೌಂಡ್ ಬಳಿ ಹಾಗೂ ಲೋಕಾಯುಕ್ತ ಕಚೇರಿಯಿಂದ 100 ಮೀಟರ್ ದೂರದಲ್ಲಿಯೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ, ಲೋಕಾಯುಕ್ತ ಕಚೇರಿಯಿಂದ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಲೋಕಾಯುಕ್ತ ಕಚೇರಿಯ ಸುತ್ತಮುತ್ತ ಇರುವ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.

ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಸರ್ಕಾರಿ ಅತಿಥಿಗೃಹಕ್ಕೆ ತೆರಳಿ ಆನಂತರ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಸರ್ಕಾರಿ ಗೌರವವನ್ನು ನೀಡಲಾಯಿತು. ಕೆಎಸ್‌ಆರ್‌ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ತೊಂದರೆಯಾಗದAತೆ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular