Tuesday, July 1, 2025
Flats for sale
Homeರಾಜ್ಯಬೆಂಗಳೂರು ; ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನದ ಹಣ 21 ಕೋಟಿ ಚುನಾವಣೆಗೆ ಬಳಕೆ :...

ಬೆಂಗಳೂರು ; ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನದ ಹಣ 21 ಕೋಟಿ ಚುನಾವಣೆಗೆ ಬಳಕೆ : ಸಂಸದ ತುಕಾರಾಂ ಇಡಿ ವಶಕ್ಕೆ ..!

ಬೆಂಗಳೂರು ; ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸುಮಾರು ೨೧ ಕೋಟಿ ಹಣವನ್ನು ಚುನಾವಣೆಗೆ ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಇದರ ಜೊತೆಗೆ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸಂಸದರು ಕೆಲ ಶಾಸಕರ ಮನೆಗಳ ಮೇಲೆ ಇಂದು ಮುAಜಾನೆಯಿAದ ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿಗಮದ ಸುಮಾರು 21 ಕೋಟಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸAಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ಹಂಚಿರುವ ಆರೋಪದ ಮೇಲೆ ಏಕಕಾಲದ ದಾಳಿ ನಡೆಸಿ ಶೋಧ ಕೈಗೊಳ್ಳಲಾಗಿದೆ.

ಬೆಳಗಿನ ಜಾವ 4 ರಿಂದ 5 ಗಂಟೆಯ ಸುಮಾರಿಗೆ ಸಂಸದ ಇ.ತುಕಾರಾಮ್,ಮಾಜಿ ಸಚಿವ ನಾಗೇಂದ್ರ ಮತ್ತು ಅವರ ಆಪ್ತ ಕಾರ್ಯದರ್ಶಿ (ಪಿಎ) ಗೋವರ್ಧನ್, ಶಾಸಕ ಭರತ್ ರೆಡ್ಡಿ, ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಎಂಟು ತಂಡಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು. ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.

ಬಳ್ಳಾರಿ ಲೋಕಸಭಾ ಸಂಸದ ತುಕಾರಾA (ಸಂಡೂರು), ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ, ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ, ಕಂಪ್ಲಿ ಶಾಸಕ ಗಣೇಶ, ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಕಚೇರಿ, ಮನೆ ಮೇಲೆ ಇಡಿ ದಾಳಿ ನಡೆಸಿದೆ. ಕೂಡ್ಲಿಗಿ ಶಾಸಕರ ಮನೆ ಮೇಲೆ ಇಡಿ ದಾಳಿ ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಹುಟ್ಟೂರು ನರಸಿಂಹನಗಿರಿ ಗ್ರಾಮದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎರಡು ಕಾರುಗಳಲ್ಲಿ ಮೂವರು ಪುರುಷರು, ಒಬ್ಬರು ಮಹಿಳಾ ಅಧಿಕಾರಿಗಳು ನಾಲ್ವರು ಭದ್ರತಾ ಸಿಬ್ಬಂದಿಯೊAದಿಗೆ ಆಗಮಿಸಿ ದಾಖಲೆ ಪತ್ರ, ಮೊಬೈಲ್ ಸೇರಿದಂತೆ ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇಡಿ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಮನೆಯಲ್ಲಿ ಇರಲಿಲ್ಲ. ಶಾಸಕರ ತಾಯಿ ಮಾತ್ರ ಇದ್ದರು. ಬೆಳಗ್ಗೆ 5 ಗಂಟೆಯಿAದ ಮಾಹಿತಿಗಾಗಿ ಅಧಿಕಾರಿಗಳು ಇನ್ನೂ ತಲಾಶ್ ನಡೆಸುತ್ತಿದ್ದಾರೆ.

ವಾಲ್ಮೀಕಿ ಹಗರಣವು ೨೦೨೪ ರಲ್ಲಿ ಕರ್ನಾಟಕದಲ್ಲಿ ಬೆಳಕಿಗೆ ಬಂದ ಒAದು ದೊಡ್ಡ ಆರ್ಥಿಕ ವಂಚನೆ ಹಗರಣವಾಗಿದೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್. ಪಿ (52) ವಾಲ್ಮೀಕಿ ನಿಗಮದ ಅನುದಾನದ ಹಣವು ದುರುಪಯೋಗವಾಗಿದೆ ಎಂದು ಆರೋಪಿಸಿ, ಮೇ 26 ರಂದು 5 ಪುಟಗಳ ಡೆತ್ ನೋಟ್ ಬರೆದುಬಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಜತೆಗೆ ನಿಗಮದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ವರ್ಗಾವಣೆಯಾಗಿದಾಗಿ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular