ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಂಚಾರ ನಿಯಮದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.ಈಗಾಗಲೇ ಕರ್ನಾಟಕದಾದ್ಯಂತ ಹೈ ಬೀಮ್ ಲೈಟ್ ವಾಹನಗಳನ್ನು ತಡೆದು ದಂಡ ಹಾಕುವ ಕೆಲಸ ನಡೆದಿದೆ. ಇದರ ಜೊತೆಗೆ ಒನ್ವೇ, ಫುಟ್ಬಾತ್ ಮೇಲೆ ವಾಹನ ಚಾಲನೆ ಮಾಡುವವರ ವಿರುದ್ಧ ಇದೇ ಆಗಸ್ಟ್ನಿಂದ ಇನ್ನಷ್ಟು ಕಠಿಣ ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ರಾತ್ರೆ ವೇಳೆ ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ಎಸ್ 281 ಅಡಿಯಲ್ಲಿ ಮತ್ತು 184 ಐಎಂವಿ ಕಾಯ್ದೆಯಡಿ ಹಾಗೂ ಎಫ್ಐಆರ್ ದಾಖಲು ಮಾಡಲು ಕ್ರಮ ಜರುಗಿಸಬೇಕೆಂದು ಖಡಕ್ ಸೂಚನೆ ರವಾನಿಸಿದ್ದಾರೆ. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು,ಮಂಗಳೂರು ನಗರ,ಹುಬ್ಬಳ್ಳಿ ,ಧಾರವಾಡ ನಗರ,ಮೈಸೂರು ,ಚಾಮರಾಜನಗರ ,ಉತ್ತರಕನ್ನಡ ,ರಾಯಚೂರು ,ಬಳ್ಳಾರಿ ,ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಣ್ಣು ಕುಕ್ಕುವ ಎಲ್ಇಡಿ ಲೈಟ್,ಒನ್ವೇ ರೈಡ್ , ಫುಟ್ಬಾತ್ ಮೇಲೆ ವಾಹನ ಚಾಲಯಿಸಿವದರ ವಿರುದ್ಧ ಹೆಚ್ಚು ಪ್ರಕರಣ ದಾಖಲಾಗಿದ್ದು ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಶ್ಲಾಘಿಸಿದ್ದಾರೆ.