ಬೆಂಗಳೂರು : ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯ ನಂತರ ರಾಜ್ಯದ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.
ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕ ಸಹ ನೇಮಕ ಮಾಡಲಾಗಿದೆ.ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದ್ದಾರೆ.
ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಕ್ಕೆ ಅರವಿಂದ್ ಬೆಲ್ಲದ್ ಅಸಮಾಧಾನಗೊಂಡಿದ್ದರು. ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅರವಿಂದ ಬೆಲ್ಲದ್ ಅವರನ್ನು ಸಮಾಧಾನಪಡಿಸಲು ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.
ಆರ್. ಅಶೋಕ್ ಅವರನ್ನು ವಿಧಾನಭೆಯ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡಬೇಕು ಎಂಬ ಬೇಡಿಕೆ ಇತ್ತು. ಆದರೆ, ಕಳೆದ ಬಾರಿ ವಿಧಾನ ಪರಿಷತ್ ವಿಪಕ್ಷ ಸ್ಥಾನವನ್ನು ಚೆನ್ನಾಗಿ ನಿಭಾಯಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರಿಗೇ ಪಕ್ಷ ಮಣೆ ಹಾಕಿದೆ. ಉತ್ತರ ಕರ್ನಾಟಕ ಭಾಗದಿಂದ ವಿಪಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದ ರಘುನಾಥ್ ಮಲ್ಕಾಪುರೆ ಅವರಿಗೆ ಉಪ ನಾಯಕನ ಸ್ಥಾನ ನೀಡಲಾಗಿದೆ.ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್ ರವಿ ಕುಮಾರ್ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.


