ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ನ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ದೇಶದ್ರೋಹಿಗಳು ಘೋಷಣೆ ಕೂಗಿದ ಹಿನ್ನೆಲೆ ಎಫ್ಎಸ್ಎಲ್ ವರದಿಯಲ್ಲೂ ಸಹ ದೃಢಪಟ್ಟಿದ್ದು ಈ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಅವರಿಗೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ, ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ ದೇಶದ್ರೋಹಿ ಹುಸ್ಸೇನ್ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು ಎಂದು ವಿಜಯೇಂದ್ರ ಕಿಡಿಕಾರಿದ್ದರು.ಇತ್ತೀಚೆಗೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ ಪಾಕಿಸ್ತಾನದ ಪರ ವಿಧಾನಸೌಧದಲ್ಲಿ ಘೋಷಣೆ ಕೂಗಿದ ಪ್ರಕರಣ ಪೂರ್ಣಗೊಳ್ಳದ ಹೊರತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಡಾ ಸಯ್ಯದ್ ನಾಸೀರ್ ಹುಸ್ಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಹೇಳಿದ್ದರು.
ಈ ಪ್ರಕರಣದ ಹಿನ್ನೆಲೆ FSL ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಆರೋಪಿತರು ಒಂದಲ್ಲ, ಬದಲಾಗಿ ಎರಡು ಬಾರಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋದು ಖಚಿತವಾಗಿದೆ. ಕಾಂಗ್ರೆಸ್ ಸಂಸದ ಡಾ ಸಯ್ಯದ್ ನಾಸೀರ್ ಹುಸ್ಸೇನ್ ಬಲಗೈ ಬಂಟ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ನಾಶಿಪುಡಿಯನ್ನ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ, ಅತ್ತ ಮೊಟೆಬೆನ್ನೂರು ಗ್ರಾಮದಲ್ಲಿ ಉಗ್ರ ಪ್ರತಿಭಟನೆ ನಡೆಸಿದ ರೈತರು ನಾಶಿಪುಡಿಗೆ ಸೇರಿದ ಕೋಲ್ಡ್ ಸ್ಟೋರೇಜ್ಗೆ ರೈತರು ಮುತ್ತಿಗೆ ಹಾಕಿದ್ದಾರೆ.ಕೂಡಲೇ ದೇಶದ್ರೋಹಿ ನಾಶಿಪುಡಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದ್ದಾರೆ.
ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು,ಈ ಮದ್ಯೆ ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ವಾಗ್ದಾಳಿ ಮಾಡಿದ್ದು ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ.


