ಬೆಂಗಳೂರು : ಬೆಂಗಳೂರಿನ ವೈದ್ಯಕೀಯ ಕಾಲೇಜಿನ 49 ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಹಾಸ್ಟೆಲ್‌ನ ಎಲ್ಲ ಕಾಲರಾ ವರದಿ ಕೈ ಸೇರಿದ್ದು, ಇತರರು ಸೋಂಕಿನಿಂದ ಸೇಫ್ ಎಂದು ಹೇಳಲಾಗುತ್ತಿದೆ. ಎಂದು ಊಹಿಸಲಾಗಿದೆ. ಇದರ ಜತೆಗೆ
ಬೆಂಗಳೂರು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೌಶಿನ್ ಇದನ್ನು ಸ್ಪಷ್ಟಪಡಿಸಿದ್ದಾರೆ. ನಿನ್ನೆ 47 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಹೊಸದಾಗಿ ಇಬ್ಬರು ದಾಖಲಾಗಿದ್ದಾರೆ. ಈಗ ಒಟ್ಟು 49ರ ಪೈಕಿ ಇಬ್ಬರಿಗೆ ಕಾಲರಾ ಇರುವುದು ದೃಢವಾಗಿದೆ ಎಂದಿದ್ದಾರೆ.
ಬೆಂಗಳೂರು ; ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ 49 ವೈದ್ಯಕೀಯ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಿನ್ನೆ 47 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಹೊಸದಾಗಿ ಇಬ್ಬರು ದಾಖಲಾಗಿದ್ದಾರೆ. ಈಗ ಒಟ್ಟು 49ರ ಪೈಕಿ ಇಬ್ಬರಿಗೆ ಕಾಲರಾ ಇರುವುದು ದೃಢವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೌಶಿನ್ ಇದನ್ನು ಸ್ಪಷ್ಟಪಡಿಸಿದ್ದಾರೆ.
ಸಾಮಾನ್ಯವಾಗಿ ಕಲುಷಿತ ನೀರು ಹಾಗೂ ಆಹಾರದಿಂದ ಹರಡುವ ಕಾಲರಾ ಸಾಂಕ್ರಾಮಿಕ ಬೆಂಗಳೂರಿನ ಇನ್ನಿತರ ಕಡೆಯೂ ಹರಡುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸಂಭಾವ್ಯ ಕಾಲರಾ ಸಾಂಕ್ರಾಮಿಕ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯೆ ಯಿಂದ ಅವ್ಯವಸ್ಥೆ ಉಂಟಾಗಿದೆ ಎಂದು ತಿಳಿದುಬಂದಿದೆ. ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು ಹಾಲಿ ಹಾಸ್ಟೆಲ್‌ನ ಕಿಚನ್ ಅನ್ನು ಸೀಝ್ ಮಾಡಲಾಗಿದೆ. ಸದ್ಯ ವಿದ್ಯಾರ್ಥಿಗಳಿಗೆ ಹೊರಗಿನಿಂದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಕಿಚನ್‌ನಿಂದ ಊಟ ಕೊಡಲಾಗುತ್ತಿದೆ.
ಈಗ ಉಳಿಕೆ ಸಂಶೋಧನಾ ವಿದ್ಯಾರ್ಥಿನಿಯರ ಟೆಸ್ಟ್ ರಿಪೋರ್ಟ್ ಬಂದಿದ್ದು .ಕಲ್ಚರ್ ರಿಪೋರ್ಟ್ ನಲ್ಲಿ ಎರಡು ಕಾಲರಾ ಕೇಸ್ ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿಗೆ ಕಾಲರಾ ಪತ್ತೆಯ ಬಗ್ಗೆ ಅನುಮಾನವಿದೆ. ವರದಿ ನಮ್ಮ ಕೈ ಸೇರಿದೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಹಾಸ್ಟೆಲ್ ನಲ್ಲಿ ಅವ್ಯವಸ್ಥೆ ಇರೋದು ಪರಿಶೀಲನೆ ವೇಳೆ ಕಂಡುಬಂದಿದೆ. ಅದನ್ನ ಸರಿ ಮಾಡುವ ಅಧಿಕಾರ ವಾರ್ಡನ್ ಗೆ ಇತ್ತು ಅವರು ಮಾಡಿಲ್ಲ ಹೀಗಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಕಾಲರಾ ಪತ್ತೆ ಹಿನ್ನೆಲೆ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹೊರಗಿನಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಹಾಸ್ಟೆಲ್ ಕಿಚನ್ ಸೀಝ್ ಮಾಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆ ಕಿಚನ್ ನಿಂದ ಊಟದ ವ್ಯವಸ್ಥೆ ಮಾಡಲಾಗಿದೆ.