ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿಂದನೆ ಮಾಡಿದ ಆರೋಪದ ಮೇರೆಗೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್ ಅಹ್ಮದ್ ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್‌ಬುಕ್ ಲೈವ್‌ನಲ್ಲಿ ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದ.ಈ ಹಿನ್ನೆಲೆ ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ಗೆ ನಿಂದನೆ ಆರೋಪ ಹಿನ್ನೆಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.


