Sunday, March 23, 2025
Flats for sale
Homeರಾಜಕೀಯಬೆಂಗಳೂರು ; ಸದನದಲ್ಲಿ ಭಾರೀ ಗಲಾಟೆ,ಗದ್ದಲ ಎಬ್ಬಿಸಿದ್ದ 18 ಬಿಜೆಪಿ ಸದಸ್ಯರು 6 ತಿಂಗಳು ಅಮಾನತು..!

ಬೆಂಗಳೂರು ; ಸದನದಲ್ಲಿ ಭಾರೀ ಗಲಾಟೆ,ಗದ್ದಲ ಎಬ್ಬಿಸಿದ್ದ 18 ಬಿಜೆಪಿ ಸದಸ್ಯರು 6 ತಿಂಗಳು ಅಮಾನತು..!

ಬೆಂಗಳೂರು ; ಸದನದಲ್ಲಿ ಭಾರೀ ಗಲಾಟೆ ಗದ್ದಲ ಎಬ್ಬಿಸಿದ್ದ 18 ಬಿಜೆಪಿ ಸದಸ್ಯರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ರನ್ನು ಅಮಾನತು ಮಾಡಲಾಗಿದೆ.

ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು ಅಮಾನತುಗೊಳಿಸಿದ್ದಾರೆ. ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು ಒಟ್ಟಿನಲ್ಲಿ ಕಾಂಗ್ರೆಸ್ ಸರಕಾರ ಬಿಜೆಪಿ ಯವರ ವಿರುದ್ಧ ಹಗೆ ಸಾದಿಸುತ್ತಿದೆಂದು ಅಮಾನತುಗೊಂಡ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular