ಬೆಂಗಳೂರು : ಸಾಕಿದ ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿರುವ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದ ಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಅರುಣ್ ಕುಮಾರ್ (32) ಎಂದು ಗುರುತಿಸಲಾಗಿದೆ. ವೀರಭದ್ರನಗರದಲ್ಲಿ ಲಿಖಿತಾ ಎಂಬವರು ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್‌ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂದಿ ಅರುಣ್ ಕುಮಾರ್, ಕಬ್ಬಿಣದ ಪೈಪ್ ಕಟ್ಟಿಗೆ ಸೇರಿಸಿ ಅ ಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇ ಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥ ಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


