Sunday, December 14, 2025
Flats for sale
Homeರಾಜ್ಯಬೆಂಗಳೂರು : ಸಿಎಂ,ಸಿದ್ದರಾಮಯ್ಯ ಗೆ ಮತ್ತೆ ಸಂಕಷ್ಟ : 17 ಸಾವಿರ ಕೋಟಿ ರೂ ಅನುದಾನ...

ಬೆಂಗಳೂರು : ಸಿಎಂ,ಸಿದ್ದರಾಮಯ್ಯ ಗೆ ಮತ್ತೆ ಸಂಕಷ್ಟ : 17 ಸಾವಿರ ಕೋಟಿ ರೂ ಅನುದಾನ ದುರ್ಬಳಕೆ, ಗಣಿ ಗುತ್ತಿಗೆ ನವೀಕರಣ ಹೆಸರಿನಲ್ಲಿ500 ಕೋಟಿ ಬೃಹತ್ ಹಗರಣದ ಆರೋಪ..!

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಆರೋಪಗಳಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿರುವಾಗಲೇ ಮುಖ್ಯಮಂತ್ರಿ ವಿರುದ್ಧ ಈಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಗಣಿ ಗುತ್ತಿಗೆ ನವೀಕರಣ ಹೆಸರಿನಲ್ಲಿ 500 ಕೋಟಿ ರೂ. ಲಂಚ ಪಡೆದಿದ್ದಾರೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲ ಥಾವರ್‌ಚಂದ್‌ಗೆಲ್ಹೋಟ್ ಅವರಿಗೆ ಮನವಿ ಮಾಡಿದ್ದಾರೆ.


ಈ ಹಿಂದೆ 2015 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸAದರ್ಭದಲ್ಲಿ 8 ಗಣಿಗುತ್ತಿಗೆ ನವೀಕರಣ ಪ್ರಕರಣದಲ್ಲಿ 500 ಕೋಟಿ ರೂ. ಲಂಚಪಡೆದಿದ್ದಾರೆ ಎಂದು ರಾಮಮೂರ್ತಿಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ಹಾಗೂ ಮತ್ತೊಂದು ಪ್ರಕರಣದಲ್ಲಿ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್​ಆರ್​ ರಮೇಶ್ ಕೇಂದ್ರ ಸರ್ಕಾರದ ಅಮೃತ್ ಯೋಜನೆಯ 17 ಸಾವಿರ ಕೋಟಿ ರೂ. ಅನುದಾನ ದುರ್ಬಳಕೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದು, ಹಗರಣದ ಸಂಬಂಧ ಲೋಕಾಯುಕ್ತ ಅಪರ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

ಈ ಗಣಿ ಗುತ್ತಿಗೆಗಳನ್ನು ಹರಾಜಿಗೆ ಹಾಕುವ ಬದಲು ನವೀಕರಣ ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿದ್ದರಾಮಯ್ಯ ಅವರುನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಅನುಮತಿ ನೀಡಿ ಎಂದು ದೂರುದಾರರು ಮನವಿ
ಮಾಡಿದ್ದಾರೆ.ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪೌರಾಡಳಿತ ಇಲಾಖೆ ಕೇಂದ್ರ ಸರ್ಕಾರದ ಅಮೃತ್ ಯೋಜನೆಯ ಅನುಷ್ಠಾನ ಹೊಣೆ ಹೊತ್ತಿದೆ. ಆದರೆ ಇದೇ ಯೋಜನೆಯ 17 ಸಾವಿರ ಕೋಟಿ ರೂ. ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಎನ್​ಆರ್ ರಮೇಶ್​ ಆರೋಪ ಮಾಡಿದ್ದಾರೆ.

17 ಸಾವಿರ ಕೋಟಿ ರೂ ಅನುದಾನ ದುರ್ಬಳಕೆ ದೂರಿನಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಶಾಸಕ ವಿನಯ ಕುಲಕರ್ಣಿ, ಪೌರಾಡಳಿತ ನಿರ್ದೇಶಕ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಕಟ್ಟಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಅಭಿಯಂತರ ವಿಎಲ್ ಚಂದ್ರಪ್ಪ ಮತ್ತು ಟಿಎನ್ ಮುದ್ದು ರಾಜಣ್ಣ ಸೇರಿ ಹಲವು ಅಧಿಕಾರಿಗಳ ವಿರುದ್ಧ 7,281 ಪುಟಗಳ ದಾಖಲೆ ಸಹಿತ ಲೋಕಾಯುಕ್ತಗೆ ದೂರು ನೀಡಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದದೂರು ನೀಡಿರುವ ಸಾಮಾಜಿಕ ಕಾರ್ಯಕರ್ತರೊಬ್ಬರ ಜತೆ ರಾಜ್ಯಪಾಲರು ಚರ್ಚೆ ನಡೆಸಿದ್ದು, ಕಾನೂನು ವಿಭಾಗದ ಅಭಿಪ್ರಾಯಕ್ಕೆ ಈ ದೂರನ್ನು ರವಾನಿಸಿದ್ದಾರೆ. ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ಪ್ರಾಸಿಕ್ಯೂಷನ್‌ಗೆ ಅನುಮತಿನೀಡಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ಮಾಡುವ ಭರವಸೆಯನ್ನು ರಾಜ್ಯಪಾಲರು ದೂರುದಾರರಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular