Thursday, July 23, 2026
Homeರಾಜ್ಯಬೆಂಗಳೂರು : ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನೇ ಸಿಎಂ ಆಗ್ತೀನಿ ಎಂದು ಅಚ್ಚರಿಯ ಹೇಳಿಕೆ ನೀಡಿದ...

ಬೆಂಗಳೂರು : ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನೇ ಸಿಎಂ ಆಗ್ತೀನಿ ಎಂದು ಅಚ್ಚರಿಯ ಹೇಳಿಕೆ ನೀಡಿದ ಆರ್‌.ವಿ ದೇಶಪಾಂಡೆ..!

ಬೆಂಗಳೂರು : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಮೈಸೂರಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟು ಪರೋಕ್ಷವಾಗಿ ಸಿಎಂ ಆಗುವ ಆಸೆ ಬಿಚ್ಚಿಟ್ಟಿದ್ದಾರೆ. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಆರ್‌.ವಿ ದೇಶಪಾಂಡೆ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗ್ತೀನಿ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರು, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನನಗೆ ಗೊತ್ತಿಲ್ಲದೆ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ತಿಳಿಸಿದ್ದಾರೆ. ಇನ್ನೂ ಮುಡಾ ಹಗರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ? ಸಾವಿರಾರು ಕೋಟಿ ಹಗರಣ ಅಂತ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular