ಬೆಂಗಳೂರು : ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ 10 ಮಂದಿ ವಿದೇಶಿಯರನ್ನು ಬಂಧಿಸಿರುವ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಹೆಣ್ಣೂರಿನಲ್ಲಿ ಸ್ಥಳೀಯ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ, ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ಆತನ ವಶದಿಂದ 8 ಲಕ್ಷ ಮೌಲ್ಯದ ನಿಷೇದಿತ ಮಾದಕ ವಸ್ತುಗಳಾದ 55 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟಲ್ ಮತ್ತು 3 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಯಿತು. ಆರೋಪಿಯ ವಿರುದ್ಧ ಈ ಹಿಂದೆ 2024 ರಲ್ಲಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಎನ್.ಡಿ.ಪಿ.ಎಸ್ ರಿತ್ಯಾ ಪ್ರಕರಣ ದಾಖಲಾಗಿತ್ತು. ಚಿಕ್ಕಜಾಲದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ನೆಲೆಸಿದ್ದ ಮೂವರು ವಿದೇಶಿಯರನ್ನು (ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ) ಬಂಧಿಸಿ ಮಾನ್ಯ ಎಫ್.ಆರ್.ಆರ್.ಓ ರವರ ಮುಂದೆ ಹಾಜರುಪಡಿಸಿದ್ದು, ಅವರುಗಳನ್ನು ಫಾರಿನರ್ಸ್ ಡಿಟೆಂಷನ್ ಸೆಂಟರ್ ಗೆ ಕಳುಹಿಸಲಾಗಿದೆ.
ಅಮೃತಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನೆಲೆಸಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಬಂಧಿಸಿ, ಮಾನ್ಯ ಎಫ್.ಆರ್.ಆರ್.ಓ ರವರ ಮುಂದೆ ಹಾಜರುಪಡಿಸಿದ್ದು, ಅವರುಗಳನ್ನು ಫಾರಿನರ್ಸ್ ಡಿಟೆಂಷನ್ ಸೆಂಟರ್ ಗೆ ಬಿಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.
ವಿದ್ಯಾರಣ್ಯಪುರದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿಯರನ್ನು (ಓರ್ವ ಪುರುಷ ಮತ್ತು ಓರ್ವ ಮಹಿಳೆ) ಬಂಧಿಸಿ, ಮಾನ್ಯ ಎಫ್.ಆರ್.ಆರ್.ಓ ರವರ ಮುಂದೆ ಹಾಜರುಪಡಿಸಿದ್ದು, ಅವರುಗಳನ್ನು ಫಾರಿನರ್ಸ್ ಡಿಟೆಂಷನ್ ಸೆಂಟರ್ ಗೆ ಕಳುಹಿಸಲಾಗಿದೆ. ಗೋವಿಂದಪುರದಲ್ಲಿ ಓರ್ವ ವಿದೇಶಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಈ ಹಿಂದೆ ಎನ್.ಡಿ.ಪಿ.ಎಸ್ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ಮಾನ್ಯ ನ್ಯಾಯಾಲಯವು ವಾರೆಂಟ್ ಹೊರಡಿಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬAಧನಕ್ಕೆ ಒಳಪಡಿಸಿರುತ್ತಾರೆ.
ಪುಟ್ಟೇನಹಳ್ಳಿಯಲ್ಲಿ ಓರ್ವ ವಿದೇಶಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಈ ಹಿಂದೆ ಎನ್.ಡಿ.ಪಿ.ಎಸ್ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ಮಾನ್ಯ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು ತಲೆಮರೆಸಿಕೊಂಡಿದ್ದ ಬಗ್ಗೆ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬAಧನಕ್ಕೆ ಒಳಪಡಿಸಿರುತ್ತಾರೆ.
ಅಕ್ರಮವಾಗಿ ನೆಲೆಸಿದ್ದ ವಿದೇಶಿ ವ್ಯಕ್ತಿಯನ್ನು ಎಫ್.ಆರ್.ಆರ್.ಓ ರವರ ಅದೇಶದ ಮೇರೆಗೆ ಫಾರಿನರ್ಸ್ ಡಿಟೆಂಷನ್ ಸೆಂಟರ್‌ನಿAದ ಆತನ ದೇಶಕ್ಕೆ ವಾಪಸ್ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.