Friday, November 22, 2024
Flats for sale
Homeಜಿಲ್ಲೆಬೆಂಗಳೂರು : ಭಜರಂಗ ದಳ ಮುಖಂಡ ಭರತ್ ಕುಮಾರ್ ಕುಂಬ್ಡೆಲ್ ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್.

ಬೆಂಗಳೂರು : ಭಜರಂಗ ದಳ ಮುಖಂಡ ಭರತ್ ಕುಮಾರ್ ಕುಂಬ್ಡೆಲ್ ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್.

ಬೆಂಗಳೂರು : ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದ್ದು ಈ ನಡುವೆ ಗಡಿಪಾರಿಗೆ ಆದೇಶಿಸಿ ಹಲವು ಮುಖಂಡರನ್ನು ಗಡಿಪಾರು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಭಜರಂಗ ದಳ ಮುಖಂಡ ಭರತ್ ಕುಮಾರ್ ಕುಂಬ್ಡೆಲ್ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು ಈ ಬಗ್ಗೆ ಭರತ್ ಕುಮಾರ್ ಕುಂಬ್ಡೆಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಈ ಬಗ್ಗೆ ಅರ್ಜಿದಾರ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರು ಪ್ರತಿನಿಧಿಸಿದ್ದು ಭರತ್ ಕುಮಾರ್ ತಮ್ಮ ವಿರುದ್ಧ ಇದ್ದ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಈಗಾಗಲೇ ಆರು ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣದಲ್ಲಿ ನ್ಯಾಯಾಲಯದ ತಡೆ ಆದೇಶ ಇದ್ದು ಇನ್ನೊಂದು ವಿಚಾರಣೆ ಹಂತದಲ್ಲಿದೆ. ಹೀಗಿರುವಾಗ ಮಂಗಳೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಗಡಿಪಾರು ಆದೇಶ ಊಹೆಗಳಿಂದ ಕೂಡಿದೆ. ಭರತ್ ಕುಮಾರ್ ಅಪರಾಧಿಕ ಪ್ರಕರಣಗಳಲ್ಲಿ ಭಾಗಿಯಾಗಬಹುದು ಎಂಬ ಶಂಕೆ ಕಾನೂನು ಬಾಹಿರ. ಆದ್ದರಿಂದ, ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಕೋರಿದರು.

ಇದನ್ನು ಪುರಸ್ಕರಿಸಿದ ಪೀಠವು ಮಂಗಳೂರು ಉಪ ವಿಭಾಗಾಧಿಕಾರಿ ಎಸ್ ಜೆ ಹರ್ಷವರ್ಧನ್ ಅವರು ಕರ್ನಾಟಕ ಪೊಲೀಸ್ ಕಾಯಿದೆ-1963ರ ಸೆಕ್ಷನ್ 55 ಮತ್ತು 56ರ ಅಡಿಯಲ್ಲಿ ತಮ್ಮ ಅರೆನ್ಯಾಯಿಕ ಪ್ರಕ್ರಿಯೆಯಲ್ಲಿನ ಅಧಿಕಾರ ಚಲಾಯಿಸಿ ಇದೇ 2ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ರದ್ದುಗೊಳಿಸಿದೆ.

ಭರತ್ ಕುಮಾರ್ ಬಂಟ್ವಾಳ ತಾಲ್ಲೂಕು ಪುದು ಗ್ರಾಮದ ಕುಮ್ಡೇಲು ಮನೆ ನಿವಾಸಿಯಾಗಿದ್ದು ಈತ ರೌಡಿ ಸ್ವಭಾವ ಹೊಂದಿರುತ್ತಾನೆ. ತನ್ನ ಸಹಚರರೊಂದಿಗೆ ಪರಂಗಿಪೇಟೆ, ಕಡೆಗೋಳಿ, ಬಿ ಸಿ ರೋಡ್ ಹಾಗೂ ಬಂಟ್ವಾಳ ಪ್ರದೇಶಗಳಲ್ಲಿ ಕೊಲೆ, ಕೊಲೆ ಯತ್ನ, ದೊಂಬಿ, ಹಲ್ಲೆಯಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಉಪ ವಿಭಾಗಾಧಿಕಾರಿಯು ತಮ್ಮ ಆದೇಶದಲ್ಲಿ ವಿವರಿಸಿದ್ದರು.

ಲೋಕಸಭೆಗೆ ಸಾರ್ವತ್ರಿಕ ಚುನಾವಣೆಗಳು ನಡೆಯುತ್ತಿದ್ದು 2024ರ ಮಾರ್ಚ್ ಮತ್ತು ಮೇ ಮಧ್ಯದಲ್ಲಿ ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅಗತ್ಯವಿರುವುದರಿಂದ ಈತನನ್ನು 2024ರ ಮಾರ್ಚ್ 28ರಿಂದ 2024ರಿಂದ ಜಾರಿಗೆ ಬರುವಂತೆ ಜೂನ್ 30ರವರೆಗೆ ಗಡಿಪಾರು ಮಾಡಲಾಗಿದೆ ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular