Thursday, November 6, 2025
Flats for sale
Homeರಾಜ್ಯಬೆಂಗಳೂರು : ಹೆಚ್​​​ಎಸ್​ಆರ್​ಪಿ (HSRP)ನಂಬರ್​ ಪ್ಲೇಟ್​​ ಅವಳಡಿಸುವ ಅವಧಿ 3 ತಿಂಗಳವರೆಗೆ ವಿಸ್ತರಣೆ.

ಬೆಂಗಳೂರು : ಹೆಚ್​​​ಎಸ್​ಆರ್​ಪಿ (HSRP)ನಂಬರ್​ ಪ್ಲೇಟ್​​ ಅವಳಡಿಸುವ ಅವಧಿ 3 ತಿಂಗಳವರೆಗೆ ವಿಸ್ತರಣೆ.

ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನ್​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಸರ್ವರ್ ಡೌನ್ ,ಇನ್ನಿತರ ಸಮಸ್ಯೆಯನ್ನು ಜನಸಾಮಾನ್ಯರು ಎದುರಿಸುವ ಸಂದರ್ಭದಲ್ಲಿ ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಹಳ್ಳಿ ಜನರಿಗೂ ಸರಿಯಾದ ಮಾಹಿತಿ ಇಲ್ಲ,ತುರಾತುರಿ ದಂಡ ಹಾಕುವುದರಿಂದ ಜನಸಾಮನ್ಯರಿಗೆ ಹೊರೆಯಾಗಲಿದೆ ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು.

ಆನ್ಲೈನ್ ನಲ್ಲಿ ಫೇಕ್ ವೆಬ್ಸೈಟ್ ಮೂಲಕ ಹಲವಾರು ಜನರು ನೋಂದಣಿಯಾಗಿ ಹಣಕಳೆದುಕೊಂಡ ವಿಚಾರ ಸದನದಲ್ಲಿ ತಿಳಿಸಿದ ಪರಿಣಾಮ ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ಭದ್ರತೆಯ ದೃಷ್ಟಿಯಿಂದ ಕಡ್ಡಾಯವಾಗಿ ಹೈಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಎಸಗುವ ಅಪರಾಧಗಳನ್ನು ತಡೆಗಟ್ಟುವುದು ಮತ್ತು ರಸ್ತೆಯ ಮೇಲೆ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ.

ಅಲ್ಲದೆ, ನೋಂದಣಿ ಫಲಕಗಳನ್ನು ವಿರೂಪಗೊಳಿಸುವ ಮತ್ತು ನಕಲಿ ನೋಂದಣಿ ಫಲಕಗಳನ್ನು ನಿಯಂತ್ರಿಸಲು ಸಹಾಯಕವಾಗುತ್ತದೆ. ಪ್ರವರ್ತನ ಮತ್ತು ಭದ್ರತೆ ದೃಷ್ಟಿಯಿಂದ ಅತಿ ಸುರಕ್ಷಿತ ನೋಂದಣಿ ಫಲಕಗಳು ಪ್ರಮುಖ ಪಾತ್ರ ವಹಿಸುತ್ತವೆ.

ಕೇಂದ್ರ ಮೋಟಾರು ವಾಹನ ನಿಯಮಗಳು 1989 ರ ನಿಯಮ 50 ರಲ್ಲಿ ನಿಗದಿಪಡಿಸಿರುವಂತೆ ವಾಹನಗಳ ಮೇಲೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಹೈಸೆಕ್ಯುರಿಟಿ ರಿಜಿಸ್ಟೆçÃಷನ್ ನಂಬರ್ ಅಳವಡಿಸಲು ಸೂಚಿಸಲಾಗಿರುತ್ತದೆ ಎಂದು ಹೇಳಿದರು.

ನೋAದಣಿ ಫಲಕವು ಅಲ್ಯೂಮಿನಿಯಂನಿAದ ನಿರ್ಮಿತವಾದ “ಹೈ ಸೆಕ್ಯುರಿಟಿ ರಿಜಿಸ್ಟೆçÃಶನ್ ಪ್ರೇಟ್” ಆಗಿದ್ದು, ಮರುಬಳಕೆ ಮಾಡಲಾಗದ ಎರಡು ಲಾಕ್‌ಗಳನ್ನು ಬಳಸಿಕೊಂಡು ವಾಹನದ ಮೇಲೆ ಸ್ಥಿರವಾಗಿ ಅಳವಡಿಸಲಾಗುತ್ತದೆ. ನಕಲಿನಿಂದ ರಕ್ಷಿಸಲು 20 MM x90 MM ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೊಲೊಗ್ರಾಮ್ ಅನ್ನು ಮುಂಭಾಗ ಮತ್ತು ಹಿಂಭಾಗದ ಎರಡೂ ಪ್ಲೇಟ್‌ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಸ್ಯಾಂಪಿAಗ್ ಮೂಲಕ ಅಳವಡಿಸಲಾಗುತ್ತದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಆದೇಶದನ್ವಯ ಎಲ್ಲಾ ರಾಜ್ಯಗಳಲ್ಲಿಯೂ ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ಅಳವಡಿಸಲಾಗುತ್ತಿದ್ದು, ಅದೇ ರೀತಿಯಾಗಿ ರಾಜ್ಯದಲ್ಲಿಯೂ ಸಹ ಫಲಕಗಳನ್ನು ಅಳವಡಿಸಲು ಆದೇಶಿಸಲಾಗಿರುತ್ತದೆ.

ರಾಜ್ಯದಲ್ಲಿ ಏಪ್ರಿಲ್ 2019 ಕ್ಕಿಂತ ಮೊದಲು ಅಂದಾಜು 2.45 ಕೋಟಿ ವಾಹನಗಳು ನೋಂದಣಿಯಾಗಿದ್ದು, ಸುಮಾರು 2 ವಾಹನಗಳು ಅಸ್ತಿತ್ವದಲ್ಲಿವೆ. ಮೇಲಿನ ಅಂಕಿ-ಅAಶಗಳ ಪ್ರಕಾರ ಒಟ್ಟಾರೆ ಶೇ.9.16% ಪ್ರಮಾಣದ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ ಎಂದು ಉತ್ತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular