ಬೆಂಗಳೂರು : ಹೆಣ್ಣೂರಿನ ಬಾಬಾಸಾಬ್ ಪಾಳ್ಯದಲ್ಲಿ ನಿನ್ನೆ ಸಂಜೆ ನಿರ್ಮಾಣ ಹಂತದ ಕಟ್ಟಡ ಕುಸಿದು ಅವಷೇಷಗಳಡಿ ಸಿಲುಕಿದ್ದವರ ಪೈಕಿ ಮೃತರ ಸಂಖ್ಯೆ ಆರಕ್ಕೇರಿದ್ದು,ಕಟ್ಟಡ ಮಾಲೀಕ ಹಾಗೂ ಗುತ್ತಿಗೆದಾರ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಮಳೆಗೆ ಕಳಪೆ ಕಾಮಗಾರಿಯಿಂದ ನಿನ್ನೆ ಸಂಜೆ
ದಿಢೀರ್ ಕುಸಿದಿದ್ದ ನಿರ್ಮಾಣ ಹಂತದ ಅವಶೇಷಗಳ ತೆರವು ಕಾರ್ಯಾಚರಣೆ ಪೂರ್ಣಗೊಂಡಿದೆ, ದುರಂತದಲ್ಲಿ ಎಂಟು ಕೂಲಿ ಕಾರ್ಮಿಕರು ಜೀವ ತೆತ್ತಿದ್ದು,ಗಾಯಗೊಂಡವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ. ಕೊನೆಯ ಹಂತದ ಕಾರ್ಯಾಚರಣೆ ವೇಳೆ ಎನ್ ಡಿ ಆರ್ ಎಫ್ ಸಿಬ್ಬಂದಿ
ಹಿAದಿ ಮತ್ತು ಕನ್ನಡದಲ್ಲಿ ನಿಮಗೆ ಕೇಳಿಸ್ತಿದ್ಯಾ..? ನಾವು ನಿಮ್ಮನ್ನ ರಕ್ಷಣೆ ಮಾಡೋಕೆ ಬಂದಿದ್ದೇವೆ ಎಂದು ಕೂಗಿ ಕರೆದು,ಸೆನ್ಸಾರ್ ಮೂಲಕ ನಾಪತ್ತೆಯಾದವರ ಪತ್ತೆಗೆ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.
ಇಂದಿನ ಕಾರ್ಯಾಚರಣೆಯಲ್ಲಿ ಮತ್ತೆ 7 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಆ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ತ್ರಿಪಾಲ್‌ನ ಮೃತದೇಹವನ್ನು ಅವಶೇಷಗಳಿಂದ ಸಿಬ್ಬಂದಿಗಳು ಹೊರತೆಗೆದಿದ್ದಾರೆ.
ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಜನರನ್ನು ರಕ್ಷಿಸಲಾಗಿದ್ದು, ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದು,ಅವರಲ್ಲಿ ಈಗಾಗ¯ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ. ಹೆಣ್ಣೂರು ಪೊಲೀಸರು ಸದ್ಯ ಆರೋಪಿಯನ್ನ ಬಂಧಿಸಿದ್ದಾರೆ. ಕಾಂಟ್ರಾಕ್ಟರ್ ಮುನಿಯಪ್ಪನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿಯಪ್ಪ 4ನೇ ಮಹಡಿವರೆಗೆ ಕಟ್ಟಡ ನಿರ್ಮಾಣ ಮಾಡಿದ್ದ. ಹೀಗಾಗಿ ಪೊಲೀಸರು ಆತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಿಎನ್‌ಎಸ್ (BNS), ಬಿಬಿಎಂಪಿ(BBMP) ಆರ್‌ಇಆರ್‌ಎ (RERA) ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಇವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.