ಬೆಂಗಳೂರು : ಶಾಲಾ ಮಕ್ಕಳ ಜೀವನದಲ್ಲಿ ಆಟವಾಡುವ ಸರಕಾರದ ವಿರುದ್ಧ ಪೋಷಕರು ಆಕ್ರೋಶವ್ಯಕ್ತಪಡಿಸಿದ್ದು, ಈ ಮಧ್ಯೆ ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದರು. ಇದೀಗ ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ.
ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠ ಆದೇಶ ರದ್ದು ಮಾಡಿ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು.ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.ಈ ಮೂಲಕ ಲಕ್ಷಾಂತರ 5, 8, 9, 11 ನೇ ತರಗತಿಗಳ ಮಕ್ಕಳಲ್ಲಿ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ಈ ವೇಳೆ ಬೋರ್ಡ್ ಪರೀಕ್ಷೆ ನಡೆಸುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಹೈಕೋರ್ಟ್ ವಿಭಾಗೀಯ ಪೀಠ ತಿರಸ್ಕರಿಸಿದೆ. ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಅಲ್ಲೇ ಕೋರುವಂತೆ ಸೂಚನೆ ನೀಡಿದೆ.