ಬೆಂಗಳೂರು : ಕಾಂಗ್ರೆಸ್ ಸರಕಾರದ ವೈಫಲ್ಯ ,ಸರಿಯಾದ ನಾಯಕತ್ವ ಇಲ್ಲದೆ ಇರುವುದು ಹಿಂದೂಗಳ ಮೇಲೆ ಅಪನಂಬಿಕೆ ,ಹಿಂದೂ ಧರ್ಮದ ಅವಹೇಳನ,ಇದು ಜನರ ಕಣ್ಣಿಗೆ ಕಾಣೋದು ಇದಕ್ಕಿಂತ ಅತಿಹೆಚ್ಚು ಕಾಂಗ್ರೆಸ್ ಸರಕಾರದ ಹಿಂದೂ ದಮನ ನೀತಿಯಿಂದ ದೇಶದಲ್ಲಿ ನೆಲೆ ಇಲ್ಲದಂತಾಗಿದೆ ,ಇದಕ್ಕಿಂತ ಮಿಗಿಲಾಗಿ ಮೋದಿಯ ಕಾರ್ಯವೈಖರಿಗೆ ಯುವಜನಾಂಗ ಬೆಚ್ಚಿಬಿದ್ದಿದ್ದು ಈ ಬಾರಿನೂ ಮೋದಿಯ ಸರಕಾರ ದೇಶದಲ್ಲಿ ಚುಕ್ಕಾಣಿ ಇಡಿಯುತ್ತೆ ಎಂಬುದು ಜನರ ತೀರ್ಪು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಅಚ್ಚರಿಯಿಲ್ಲ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮತ್ತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದು ಈಗಾಗಲೇ ಮನವರಿಕೆ ಮಾಡಿಕೊಂಡಿವೆ ಎಂದು ಹೇಳಿದರು.
ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ, (ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು) ಜನತೆಗೆ ಕೊಟ್ಟ ಮಾತುಗಳನ್ನು ಈಡೇರಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಅಮಿತ್ ಶಾ “ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024ನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಮಂಡ್ಯ ಕ್ಷೇತ್ರ ಸಹ ನಮಗೆ ಮಹತ್ವವಾದ್ದಾಗಿದೆ ಎಂದ ವಿಜಯೇಂದ್ರ, ನಾಳಿನ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರ ಚರ್ಚೆ ಆದರೂ ಆಗಬಹುದು. ಉಳಿದಂತೆ, ಟಿಕೆಟ್ ಆಕಾಂಕ್ಷಿಗಳ ಕುರಿತು ಯಾವುದೇ ಚರ್ಚೆ ಇರುವುದಿಲ್ಲ. ಈಗಾಗಲೇ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ವರಿಷ್ಠರ ಬಳಿ ಮಾಹಿತಿ ಇದ್ದು, ವರಿಷ್ಠರು ಸೂಕ್ತ ಕಾಲದಲ್ಲಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ, 1947 ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾದ ಕಾರಣ ನೆಹರು-ಗಾಂಧಿ ವಂಶಸ್ಥರಿಗೆ ಅಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾತನಾಡಿದ ಗೃಹ ಸಚಿವರು, ರಾಮನ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂದು ದೇಶದ ಜನತೆ 500 ವರ್ಷಗಳಿಂದ ಬಯಸಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿರಲಿಲ್ಲ, ಇಂದು ಅದು ಈಡೇರಿದೆ ಎಂದರು.
ಏಕರೂಪ ನಾಗರಿಕ ಸಂಹಿತೆಯ ಕುರಿತು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ. ಆದರೆ ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದರು.
ದೇಶದ ಗೃಹ ಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಉಳಿದುಕೊಳ್ಳುವ ಹೊಟೇಲ್ ಕೊಠಡಿಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಹೊಟೇಲ್ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ.


