ಬೆಳಗಾವಿ : ಜೀವನದಲ್ಲಿ ಸಮಸ್ಯೆ ಎದುರಿಸಿಕೊಂಡೆ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನೂರಕ್ಕೆ ನೂರು ಸತ್ಯ ಆದ್ರೆ ಏನು ತಿಳಿಯದ ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಈ ಮನಕುಲಕುವ ಘಟನೆ ನಡೆದಿದೆ. ಗಂಡನ ಕಿರುಕುಳ ತಾಳಲಾರದೇ ತನ್ನಿಬ್ಬರ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ್ದಾಳೆ.
ಕುಟುಂಬದಲ್ಲಿ ಸಮಸ್ಯೆ ಇರುವ ಕಾರಣ ಈ ದೃಢ ನಿರ್ಧಾರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ .2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಮದುವೆ ಆಗಿತ್ತು. ಆದ್ರೆ, ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದಳು. ಆದರೂ ಸಹ ಕೌಟುಂಬಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದ ಆಕೆ ಕೊನೆಗೆ ಸಾವೇ ದಾರಿಯೆಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಏನೂ ತಿಳಿಯದ ಪುಟ್ಟ ಮಕ್ಕಳುಕೂಡ ಸಾವನ್ನಪ್ಪಿದ್ದು ದೃಶ್ಯ ಮನಕುಲಕುವಂತಿದೆ.
ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ , ಬಳಿಕ ಸೂಚನೆ ಮೇರೆಗೆ ಸ್ಥಳೀಯರು ಮೂರು ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಈ ಬಗ್ಗೆ ಹಾರೂಗೇರಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಪೊಲೀಸರು ಮೃತ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.


