Tuesday, September 15, 2026
Homeರಾಜ್ಯಬೆಳಗಾವಿ : ಗಣೇಶ ಚತುರ್ಥಿ ದಿನವೇ ಭೀಕರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ...

ಬೆಳಗಾವಿ : ಗಣೇಶ ಚತುರ್ಥಿ ದಿನವೇ ಭೀಕರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ.

ಬೆಳಗಾವಿ : ಗಣೇಶ ಚತುರ್ಥಿ ಸಂಭ್ರಮದ ನಡುವೆಯೇ ಬೆಳಗಾವಿಯಲ್ಲಿ ಹೃದಯವಿದ್ರಾವಕ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ಸಿಲುಕಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಕುಟುಂಬವು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಮನೆಯಲ್ಲಿ ಹೊತ್ತಿಕೊಂಡ ಬೆಂಕಿಗೆ ಇಡೀ ಕುಟುಂಬವೇ ತತ್ತರಿಸಿದ್ದು, ಗಣೇಶ ಚತುರ್ಥಿಯ ದಿನವೇ ಸಂಭವಿಸಿದ ಈ ದುರಂತ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular