ಬೆಳಗಾವಿ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇ* ಎಂಬ ಆಕ್ಷೇಪಾರ್ಹ ಪದ ಬಳಕೆ ಆರೋಪದ ಹಿನ್ನೆಲೆ ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.