ಬೆಳಗಾವಿ : ಈ ಕಲಿಯುಗದಲ್ಲಿ ಮನುಷ್ಯನ ಜೀವಕ್ಕೆ ಬೆಲೆಯಿಲ್ಲದಂತಾಗಿದೆ. ಹಣ ಇದ್ದಾರೆ ಮಾತ್ರ ಬೆಲೆ ಎಂಬುದು ಎಲ್ಲರಿಗೂ ತಿಳಿದ ವಿಚಾರ.ಆದರೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಓರ್ವ ಕಾರ್ಮಿಕ ಮೃತಪಟ್ಟಿದ್ದು ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (19) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿಕಾರ್ಮಿಕ ಸಜೀವ ದಹನವಾಗಿದ್ದು 16 ಗಂಟೆಗಳ ಕಾರ್ಯಾಚರಣೆ ಬಳಿಕ ಮೃತನ ಮೂಳೆಗಳು ಸಿಕ್ಕಿವೆ. ಆದರೆ ಇಲ್ಲೊಂದು ಅಮಾನುಷ ಘಟನೆ ನಡೆದಿದೆ . ಮೃತಪಟ್ಟ ಕಾರ್ಮಿಕನ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿರೋದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಸ್ವಲ್ಪನೂ ಕರುಣೆ ಇಲ್ಲದ ರೀತಿ ವರ್ತಿಸಿದ ಈ ಅಧಿಕಾರಿಗಳಿಗೆ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಜಾಡಿಸಿ ಬರೆದಿದ್ದಾರೆ.
ಮನೆಯ ನಿರ್ವಹಣೆ ಜವಾಬ್ದಾರಿ ಹೊತ್ತು ಕಾರ್ಖಾನೆಗೆ ಕೆಲಸ ಸೇರಿದ್ದ ಮಗ ಕಾರ್ಖಾನೆಗೆ ಬಿದ್ದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾನೆ. ಮನೆ ಮಗ ಸುಟ್ಟು ಕರಕಲಾಗಿ ಮೂಳೆಗಳು ಮಾತ್ರ ಸಿಕ್ಕಿದ್ದು ಮೂಳೆಗಳನ್ನು ಕೈ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಡಲಾಗಿದೆ. ಮಗನ ಸಾವಿನ ನೋವಿನಲ್ಲಿರುವ ತಂದೆ ಮೂಳೆಗಳನ್ನು ಕೈಯಲ್ಲಿ ಹಿಡಿದು ಮತ್ತಷ್ಟು ರೋಧಿಸಿದ ದೃಶ್ಯ ಅಂತೂ ಮನಕುಲಕುವಂತಿದೆ.
ಮಾನವೀಯತೆಯ ಅಂತಃಕರಣ ಇಲ್ಲದ @INCKarnataka ಸರ್ಕಾರ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಎದೆ ಎತ್ತರಕ್ಕೆ ಬೆಳೆದ ಮಗನ ದೇಹ ಸುಟ್ಟು ಕರಕಲಾದುದ್ದನ್ನು ಸಹಿಸಿಕೊಳ್ಳುವುದೇ ಕಷ್ಟ. ಅಂತದ್ದರಲ್ಲಿ ಮಗನ ಅಳಿದುಳಿದ ದೇಹದ ಅವಶೇಷಗಳನ್ನು ಹೆತ್ತ ತಂದೆಯ ಕೈಗೆ “ಕೈ” ಚೀಲದಲ್ಲಿ ಒಪ್ಪಿಸಿ ಮನೆಗೆ ನಡೆಯಿರಿ ಎನ್ನುವುದು ಎಷ್ಟರ ಮಟ್ಟಿಗೆ ಸರಿ..??
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದಂತಹ ಅಗ್ನಿ ಅವಘಡದಿಂದ ಬುಧವಾರದ ಮಧ್ಯಾಹ್ನದವರೆಗೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಸುಮಾರು 6 ಅಗ್ನಿಶಾಮಕ ವಾಹನಗಳು ಹಾಗೂ 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳ ನಿರಂತರ ಪ್ರಯತ್ನದಿಂದ ಇದೀಗ ಒಬ್ಬ ಕಾರ್ಮಿಕನ ಶವ ಸಂಪೂರ್ಣ ಸುಟ್ಟು ಕರಕಲಾದ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ( 20) ಅವರ ದೇಹದ ಅಂಗಾಂಗಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಮಾನವೀಯತೆ ಮರೆತ ಬೆಳಗಾವಿಯ ಅಧಿಕಾರಿಗಳು ಪ್ಲಾಸ್ಟಿಕ್ ಚೇಲದಲ್ಲಿ ಮೃತದೇಹದ ಭಾಗಗಳನ್ನು ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದ್ದಾರೆ. ಈ ದೃಶ್ಯವನ್ನು ನೋಡಿದವರ ಕರುಳು ಕಿತ್ತು ಬರುವಂತಾಗಿದೆ.
ದಾರಿಯುದ್ದಕ್ಕೂ ತಂದೆ ತನ್ನ ಕೈಯಲ್ಲಿ ಮಗನ ಸುಟ್ಟ ದೇಹದ ಅಂಗಾಂಗಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿಗೆ ಮರಗುವಂತಾಗಿದೆ. ಜಿಲ್ಲಾಡಳಿತದ ಈ ಅಮಾನವೀಯ ಕಾರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


