Monday, February 2, 2026
Flats for sale
Homeಜಿಲ್ಲೆಬೆಳ್ತಂಗಡಿ ; ಕಾರಿನ ಮೇಲೆ ಕಾಡಾನೆ ದಾಳಿ,ಹಲವರಿಗೆ ಗಾಯ.

ಬೆಳ್ತಂಗಡಿ ; ಕಾರಿನ ಮೇಲೆ ಕಾಡಾನೆ ದಾಳಿ,ಹಲವರಿಗೆ ಗಾಯ.

ಬೆಳ್ತಂಗಡಿ ; ಬೆಳ್ತಂಗಡಿ ತಾಲೂಕಿನ ನೆರಿಯ ಪೋಸ್ಟ್ ಆಫೀಸ್ ಬಳಿ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಆರು ಜನರಿದ್ದ ಆಲ್ಟೋ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕೆಲವರಿಗೆ ಗಾಯಗಳಾಗಿ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಆನೆಯನ್ನು ಕಂಡ ಕಾರಿನಲ್ಲಿದ್ದವರು ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದರು. ಕಾರಿನ ಸಮೀಪ ಬಂದ ಆನೆ ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿತ್ತು. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಕರಿದ್ದರು.

ತೋಟತಾಡಿ ಗ್ರಾಮದಲ್ಲಿ ಬೆಳಗ್ಗೆಯಿಂದಲೇ ಕಾಡಾನೆಯೊಂದು ಓಡಾಡುತ್ತಿರುವುದನ್ನು ಸ್ಥಳೀಯರು ನೋಡಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular