Saturday, August 1, 2026
Homeಜಿಲ್ಲೆಬೆಳ್ತಂಗಡಿ : ಫಾಲ್ಸ್ ನೋಡಲು ಕರೆದೊಯ್ದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ; ಇಬ್ಬರ ಬಂಧನ.

ಬೆಳ್ತಂಗಡಿ : ಫಾಲ್ಸ್ ನೋಡಲು ಕರೆದೊಯ್ದು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ; ಇಬ್ಬರ ಬಂಧನ.

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಂತ್ (28) ಹಾಗೂ ನವನೀತ್ (26) ಬಂಧಿತ ಆರೋಪಿಗಳು ಎನ್ನಲಾಗಿದೆ. 15 ವರ್ಷದ ಬಾಲಕಿಯನ್ನು ಫಾಲ್ಸ್ ನೋಡಲು ಇಬ್ಬರು ಕೊರೆದೋಯ್ದು ಅತ್ಯಾಚಾರ ಎಸಗಿದ್ದಾರೆ.

ಏಪ್ರಿಲ್ 16ರಂದು ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular