Friday, June 26, 2026
Homeಜಿಲ್ಲೆಬೆಳ್ತಂಗಡಿ : "ಬಿಜೆಪಿಗೆ ದ್ರೋಹ ಮಾಡಿದವರನ್ನು ಬಿಡುವುದಿಲ್ಲ; ಸತ್ಯ ಶೀಘ್ರದಲ್ಲೇ ಹೊರಬರುತ್ತದೆ : ಧರ್ಮಸ್ಥಳದಲ್ಲಿ ಬಿ.ವೈ....

ಬೆಳ್ತಂಗಡಿ : “ಬಿಜೆಪಿಗೆ ದ್ರೋಹ ಮಾಡಿದವರನ್ನು ಬಿಡುವುದಿಲ್ಲ; ಸತ್ಯ ಶೀಘ್ರದಲ್ಲೇ ಹೊರಬರುತ್ತದೆ : ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ ಗುಡುಗು”.

ಮಂಗಳೂರು : ರಾಜ್ಯಸಭೆ ಚುನಾವಣೆಯ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಧರ್ಮಸ್ಥಳದಲ್ಲಿ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ಪಕ್ಷಕ್ಕೆ ದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡಮತದಾನದಿಂದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿವಿಧ ಹೆಸರುಗಳನ್ನು ತೇಲಿಬಿಟ್ಟು ಬಿಜೆಪಿ ಶಾಸಕರ ಬಗ್ಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇದರಿಂದ ನಮ್ಮೊಳಗೂ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

“ನಾನು ನಮ್ಮ 63 ಶಾಸಕರಿಗೂ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ. ಪಕ್ಷಕ್ಕೆ ದ್ರೋಹ ಮಾಡಿದವರು ಯಾರು ಎಂಬುದನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಸತ್ಯ ಇಂದು ಅಲ್ಲದಿದ್ದರೂ ನಾಳೆ ಹೊರಬರುತ್ತದೆ. ಈ ವಿಚಾರಕ್ಕೆ ಇಲ್ಲಿಯೇ ಇತಿಶ್ರೀ ಹಾಡಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ” ಎಂದು ವಿಜಯೇಂದ್ರ ಹೇಳಿದರು.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ತಳ್ಳಿಹಾಕಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಆಶೀರ್ವಾದದಿಂದ ರಾಜ್ಯಾಧ್ಯಕ್ಷನ ಜವಾಬ್ದಾರಿ ಸಿಕ್ಕಿದ್ದು, ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲೆಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದ ವಿಜಯೇಂದ್ರ, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular