Saturday, July 25, 2026
Homeಜಿಲ್ಲೆಬೆಳ್ತಂಗಡಿ : ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ: ಹೈಕೋರ್ಟ್.

ಬೆಳ್ತಂಗಡಿ : ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ: ಹೈಕೋರ್ಟ್.

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.

ನವೀನ್ ಕುಮಾರ್ ನೆರಿಯ, ಗಿರೀಶ್ ಭಾರದ್ವಾಜ್ ಮತ್ತು ಪುತ್ತೂರಿನ ಬಲ್ನಾಡು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಈ ಪಿಐಎಲ್ ಸಲ್ಲಿಸಿದ್ದರು.

ಪ್ರಕರಣದ ಏಕೈಕ ಆರೋಪಿಯನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದ ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ನೊಂದ ಕುಟುಂಬ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರ ವಿಚಾರಣೆ ನಡೆಸಿದ ನ್ಯಾಯಾಲಯ ಹೇಳಿದೆ. ಪ್ರಕರಣದ ತನಿಖೆಯಲ್ಲಿನ ಲೋಪದೋಷಗಳನ್ನು ಪರಿಗಣಿಸಲು ಸಹ ಅವಕಾಶವಿದೆ.

ಅರ್ಜಿದಾರರ ಉದ್ದೇಶ ಒಳ್ಳೆಯದೇ ಆಗಿದ್ದರೂ ಎಲ್ಲವೂ ಕಾನೂನಿನ ವ್ಯಾಪ್ತಿಯಲ್ಲಿರಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
RELATED ARTICLES

LEAVE A REPLY

Please enter your comment!
Please enter your name here

Most Popular