ಬೆಳ್ತಂಗಡಿ : ಪುದುವೆಟ್ಟು ಮೂಲದ ಯುವಕನೊಬ್ಬ ಆಗಸ್ಟ್ 31ರಂದು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ವರಾಜ್ (24) ಮೃತ ವ್ಯಕ್ತಿ. ಧರ್ಮಸ್ಥಳದಲ್ಲಿ ವಾಸವಾಗಿದ್ದರೂ ಪುದುವೆಟ್ಟು ಎಂಬಲ್ಲಿನ ತಮ್ಮ ಹಳೆಯ ಮನೆಯ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ವರಾಜ್ ಉತ್ತಮ ಕಬಡ್ಡಿ ಆಟಗಾರರಾಗಿದ್ದು, ಉಜಿರೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದಿಲ್ಲ.


