Wednesday, April 29, 2026
Flats for sale
Homeಜಿಲ್ಲೆಬೈಂದೂರು : ಟ್ರಾಸಿ ಬೀಚ್ ಬಳಿ ಭೀಕರ ಅಪಘಾತ,ಮೂವರು ವಿಧ್ಯಾರ್ಥಿಗಳು ಸಾವು, ಹಲವರಿಗೆ ಗಂಭೀರ ಗಾಯ.

ಬೈಂದೂರು : ಟ್ರಾಸಿ ಬೀಚ್ ಬಳಿ ಭೀಕರ ಅಪಘಾತ,ಮೂವರು ವಿಧ್ಯಾರ್ಥಿಗಳು ಸಾವು, ಹಲವರಿಗೆ ಗಂಭೀರ ಗಾಯ.

ಬೈಂದೂರು : ಬೈಂದೂರು ತಾಲ್ಲೂಕಿನ ಟ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮುರೂಡೆಶ್ವರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪ್ರವಾಸಿ ಬಸ್ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಬಸ್ಸಿನಲ್ಲಿ ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದು, ಇವರು ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಾಮ್ಭಾಪುರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳಾಗಿದ್ದು, ಕರಾವಳಿ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular